ಚಿಕ್ಕೋಡಿ:
ರಾಜ್ಯದ ವಿವಿಧ ಜಿಲ್ಲೆಗಳ ಬಿಜೆಪಿ ನೂತನ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಭಾಗವಾಗಿದ್ದರೂ ಸಹಾ ಚಿಕ್ಕೋಡಿ ಸಂಘಟನಾತ್ಮಕ ಜಿಲ್ಲೆಯಾಗಿ ಗುರುತಿಸಿಕೊಂಡಿದೆ. ಇದೀಗ ಚಿಕ್ಕೋಡಿ ಜಿಲ್ಲೆಯಲ್ಲಿ ಹಿರಿಯ ನ್ಯಾಯವಾದಿಗೆ ಪಕ್ಷದ ಸಾರಥ್ಯ ಒಲಿದು ಬಂದಿದೆ.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಹಿರಿಯ ನ್ಯಾಯವಾದಿ ಸತೀಶ ಅಪ್ಪಾಜಿಗೊಳ ಅವರು ಚಿಕ್ಕೋಡಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ಅವರು
ಹಲವು ವರ್ಷಗಳಿಂದ ಬಿಜೆಪಿ ಸಂಘಟನೆಯ ವಿವಿಧ ಹುದ್ದೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಇದೀಗ ಅವರಿಗೆ ಜಿಲ್ಲಾ ಅಧ್ಯಕ್ಷ ಹುದ್ದೆ ಒಲಿದು ಬಂದಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು ನಾನು ಕಳೆದ ಕೆಲವು ವರ್ಷಗಳಿಂದ ಬಿಜೆಪಿ ಸಂಘಟನೆಯಲ್ಲಿ ಶಕ್ತಿ ಮೀರಿ ದುಡಿದಿದ್ದೇನೆ. ನನಗೆ ಇದೀಗ ಬಿಜೆಪಿ ಕಟ್ಟಲು ಪಕ್ಷ ಅವಕಾಶ ನೀಡಿದೆ. ಅಧ್ಯಕ್ಷರನ್ನಾಗಿ ನೇಮಕ ಮಾಡಲು ಜಿಲ್ಲೆಯ ಎಲ್ಲಾ ನಾಯಕರು ಮತ್ತು ಕಾರ್ಯಕರ್ತರ ಸಹಕಾರಕ್ಕೆ ಧನ್ಯವಾದ. ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ಕೊಡುತ್ತೇನೆ. ಮುಂದಿನ ದಿನಗಳಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಬಿಜೆಪಿ ಕಟ್ಟಲು ಶ್ರಮಿಸುವುದಾಗಿ ತಿಳಿಸಿದರು.