ಹೊನ್ನಾವರ: ಹೊನ್ನಾವರ ತಾಲೂಕಿನ ಸುಳೆಮುರ್ಖಿ ಬಳಿ ರಾಷ್ಟ್ರೀಯ ಹೆದ್ದಾರಿ 69 ರಲ್ಲಿ ಸೋಮವಾರ ನಸುಕಿನಲ್ಲಿ ಕಬ್ಬಿಣದ ಸಾಮಗ್ರಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಇಬ್ಬರು ಮೃತಪಟ್ಟಿದ್ದಾರೆ. ಮೃತರು ಬಿಹಾರ ಮೂಲದವರು. ಅವರ ಗುರುತು ಪತ್ತೆಯಾಗಿಲ್ಲ. ವಾಹನದಲ್ಲಿ ಒಟ್ಟು ಆರು ಜನ ಪ್ರಯಾಣಿಸುತ್ತಿದ್ದರು. ಮೂವರು ಗಾಯಗೊಂಡಿದ್ದಾರೆ. ಹೊನ್ನಾವರ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.