ಬೆಂಗಳೂರು : ಮುಂದಿನ ಕೆಲ ದಿನಗಳಲ್ಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಬದಲಾವಣೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ ಲೋಕಸಭಾ ಕ್ಷೇತ್ರದ ಟಿಕೆಟ್‌ ಕೈತಪ್ಪಿದ ಕಾರಣಕ್ಕೆ ಮುನಿಸಿಕೊಂಡಿರುವ ವೀಣಾ ಕಾಶಪ್ಪನವರ ತಮ್ಮ ಪತಿ, ಶಾಸಕ ವಿಜಯಾನಂದ ಕಾಶಪ್ಪನವರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರನ್ನು ಗುರುವಾರ ಭೇಟಿ ಮಾಡಿ ಚರ್ಚೆ ನಡೆಸಿದರು. ಆ ವೇಳೆ ಮುಖ್ಯಮಂತ್ರಿ, ಅವರಿಗೆ ಲೋಕಸಭೆ ಚುನಾವಣೆಯ ಬಳಿಕ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಸ್ಥಾನ ನೀಡುವ ಭರವಸೆ ನೀಡಿದ್ದಾರೆ. ಇದಕ್ಕೆ ಒಪ್ಪಿರುವ ವೀಣಾ, ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡುವುದಾಗಿ ಹೇಳಿದ್ದಾರೆ. ಎಂದು ಗೊತ್ತಾಗಿದೆ.‌ ಆದರೆ ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ ತಪ್ಪಿರುವ ಕಾರಣ ಅವರು ಕಣ್ಣೀರು ಸುರಿಸಿ ಬೇಸರ ವ್ಯಕ್ತಪಡಿಸಿದ್ದಾರೆ.