ದೆಹಲಿ: ಲೋಕಸಭಾ ಚುನಾವಣೆಯಲ್ಲಿ ಧಾರಾಶಿವ ಲೋಕಸಭಾ ಕ್ಷೇತ್ರದಲ್ಲಿ ಸಾವಿರ ಮರಾಠರು ನಾಮಪತ್ರ ಸಲ್ಲಿಸಲಿದ್ದಾರೆ. ಈ ಮೂಲಕ ರಾಷ್ಟ್ರದ ಗಮನ ಸೆಳೆಯಲು ಮರಾಠ ಸಮುದಾಯದ ಜನ ನಿರ್ಧರಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಮರಾಠ ಸಮುದಾಯ ಮೀಸಲಾತಿ ಕೋರಿ ಮನೋಜ ಜಾರಂಗೆ ಪಾಟೀಲ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಸರಕಾರ ಮರಾಠ ಸಮುದಾಯಕ್ಕೆ ಪ್ರತ್ಯೇಕ ಶೇಕಡಾ ಹತ್ತು ಮೀಸಲಾತಿ ನೀಡಿದೆ. ಆದರೆ ಈ ನಿರ್ಧಾರವನ್ನು ಮನೋಜ್ ಜಾರಂಗೆ ಪಾಟೀಲ್‌ ತಿರಸ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದು, ಹೊಸ ತಂತ್ರವೊಂದನ್ನು ರೂಪಿಸಿದ್ದಾರೆ. ಸಮುದಾಯದ ಸಾವಿರ ಅಭ್ಯರ್ಥಿಗಳನ್ನು ಚುನಾವಣೆಗೆ ನಿಲ್ಲಿಸಲು ಸಿದ್ಧತೆ ಆರಂಭಿಸಿದ್ದು, ಇವಿಎಂನಲ್ಲಿ ಚುನಾವಣೆ ನಡೆಸುವುದು ಕಷ್ಟವಾಗುತ್ತದೆ. ಮರಾಠ ಸಮುದಾಯದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಧಾರಾಶಿವ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಮರಾಠ ಸಮುದಾಯ ಸಿದ್ಧತೆ ಆರಂಭಿಸಿದೆ. ಇದಕ್ಕಾಗಿ ಪ್ರತಿ ಗ್ರಾಮದಲ್ಲಿ ಒಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಭೂಮ್‌ನಲ್ಲಿ ಸಭೆ ನಡೆದಿದ್ದು, ಸಾವರಗಾಂವದಲ್ಲಿ ಸಭೆ ನಡೆಸಿ ಗ್ರಾಮದ 3 ಅಭ್ಯರ್ಥಿಗಳನ್ನು ನಾಮನಿರ್ದೇಶನ ಮಾಡಲು ನಿರ್ಧರಿಸಲಾಗಿದೆ.

ಒಟ್ಟಾರೆ, ಮಹಾರಾಷ್ಟ್ರದ ಧಾರಾಶಿವ ಈ ಸಲದ ಚುನಾವಣೆಯಲ್ಲಿ ಹೊಸ ಇತಿಹಾಸ ನಿರ್ಮಿಸುತ್ತದೋ ಕಾದು ನೋಡಬೇಕು.