ಬೆಂಗಳೂರು : ಮುಂದಿನ ಮೂರು ದಿನ ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಅತ್ಯಧಿಕ ಮಳೆ ಆಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಗಾಳಿಯ ವೇಗ ಪ್ರತಿ ಗಂಟೆಗೆ 50 ಕಿ.ಮಿಗೂ ಹೆಚ್ಚಿರುವ ಕಾರಣ, ಮೀನುಗಾರರಿಗೆ ಅಗತ್ಯ ಎಚ್ಚರಿಕೆ ನೀಡಲಾಗಿದೆ. ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಎಚ್ಚರಿಕೆ ಕೊಡಲಾಗಿದೆ. ನಾಳೆ ಗುರುವಾರ (ಜೂನ್ 27) ರಂದು ಅತ್ಯಧಿಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಕಾರಣದಿಂದ ಈ ಮೂರು ಜಿಲ್ಲೆಗಳಿಗೆ ಒಂದು ದಿನ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ನಂತರ ಎರಡು ದಿನ ಮಳೆ ಆಗುವ ಕಾರಣಕ್ಕೆ ‘ಆರೆಂಜ್ ಅಲರ್ಟ್’ ಕೊಡಲಾಗಿದ್ದು, ನಂತರ ಎರಡು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಮುಂದಿನ ಎರಡು ದಿನ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರಿಗೆ ʼಆರೆಂಜ್ ಅಲರ್ಟ್’ ನೀಡಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಹಾಸನ, ಮೈಸೂರು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.