ಬೆಂಗಳೂರು :
ಜ.22ರಂದು ರಾಮ ಮಂದಿರ ಉದ್ಘಾಟನೆ ನಡೆಯಲಿದ್ದು, ಅಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡುವಂತೆ ಶಾಸಕರು ಒತ್ತಾಯಿಸುತ್ತಿದ್ದಾರೆ. ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ದಿನಗಳ ಹಿಂದೆ ರಾಮಮಂದಿರ ಪ್ರಾಣ ಪ್ರತಿಷ್ಠೆ ದಿನ ಶಾಲಾ-ಕಾಲೇಜುಗಳಿಗೆ ರಜೆ ನೀಡುವಂತೆ ಒತ್ತಾಯಿಸಿದ್ದರು.

ಇದೀಗ ಮತ್ತೊಬ್ಬ ಶಾಸಕ ಸಹ ಅಂದು ಅಂದು ಯಾದಗಿರಿ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ ನೀಡಬೇಕೆಂದು ಶಾಸಕ ಶರಣಗೌಡ ಕಂದಕೂ‌ರ್ ಆಗ್ರಹಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿಗೆ ಪತ್ರ ಬರೆದಿರುವ ಅವರು, ಶ್ರೀರಾಮನ ಪ್ರಾಣಪ್ರತಿಷ್ಠಾಪನೆಗೆ ದೇಶ ಮಾತ್ರವಲ್ಲ, ಇಡೀ ಜಗತ್ತು ಕಾಯುತ್ತಿದೆ. ಈ ಅಭೂತಪೂರ್ವ ಕಾರ್ಯಕ್ರಮವನ್ನು ಶಾಲಾ-ಕಾಲೇಜು ವಿದ್ಯಾರ್ಥಿಗಳು ಕಣ್ಣುಂಬಿಕೊಳ್ಳಬೇಕು. ಅದಕ್ಕಾಗಿ ಶಾಲಾ-ಕಾಲೇಜುಗಳಲ್ಲಿ ಕಾರ್ಯಕ್ರಮದ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.