ಮಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರು ಎಂಬವನನ್ನು ರಾಷ್ಟ್ರೀಯ ತನಿಖಾದಳ (ಎನ್ಐಎ) ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ 2022ರ ಜುಲೈ 26ರಂದು ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರನ್ನು ಭೀಕರವಾಗಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಮುಸ್ತಾಫಾ ಪೈಚಾರು ತಲೆಮರೆಸಿಕೊಂಡಿದ್ದ. ಇವನ ಬಗ್ಗೆ ಎನ್ ಐ ಎ ಔಟ್ ಲುಕ್ ನೋಟಿಸ್ ಹೊರಡಿಸಿ, ಇವನ ಮಾಹಿತಿ ನೀಡಿದವರಿಗೆ 5 ಲಕ್ಷ ಬಹುಮಾನ ಘೋಷಿಸಿತ್ತು. ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಇವನನ್ನು ಹಾಸನ ಜಿಲ್ಲೆ ಸಕಲೇಶಪುರದಲ್ಲಿ ಬಂಧಿಸಿದ್ದು ಇವನಿಗೆ ಆಶ್ರಯ ನೀಡಿದ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.