ಬೆಂಗಳೂರು: ಶಿವಮೊಗ್ಗದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿಯವರು ಬೃಹತ್ ಪೆಂಡಾಲ್‍ನಲ್ಲಿ ಜನರನ್ನು ತೆರೆದ ವಾಹನದಲ್ಲಿ ವೀಕ್ಷಿಸುತ್ತ, ಕೈ ಬೀಸುತ್ತ ವೇದಿಕೆಗೆ ಆಗಮಿಸಿದಾಗ ಲಕ್ಷಗಟ್ಟಲೆ ಜನರು ಮೋದಿಜೀಗೆ ಜೈಕಾರ ಕೂಗಿದರು. ಭಾರತ್ ಮಾತಾ ಕೀ ಜೈ, ‘ನಮ್ಮೆಲ್ಲರ ಪರಿವಾರ- ಮೋದಿ ಪರಿವಾರ’ ಘೋಷಣೆ ಮೊಳಗಿತು.

ನಂತರ ನಡೆದ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಬಿ.ವೈ.ರಾಘವೇಂದ್ರ, ದಕ್ಷಿಣ ಕನ್ನಡದ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ, ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಬೆಂಗಳೂರು ಗ್ರಾಮಾಂತರ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್, ಶಾಸಕ ಸುನೀಲ್ ಕುಮಾರ್, ರಾಜ್ಯ ಉಪಾಧ್ಯಕ್ಷರಾದ ಬೈರತಿ ಬಸವರಾಜು, ಹರತಾಳು ಹಾಲಪ್ಪ, ಮಾಜಿ ಸಚಿವ ಅರಗ ಜ್ಞಾನೇಂದ್ರ, ಹಿರಿಯರಾದ ಡಿ.ಎಚ್.ಶಂಕರಮೂರ್ತಿ, ದಾವಣಗೆರೆ ಅಭ್ಯರ್ಥಿ ಶ್ರೀಮತಿ ಗಾಯತ್ರಿ ಸಿದ್ದೇಶ್ವರ್, ಸಂಸದ ಜಿ.ಎಂ.ಸಿದ್ದೇಶ್ವರ್, ಶಾಸಕಿ ಶ್ರೀಮತಿ ಶಾರದಾ ಪೂರ್ಯಾನಾಯಕ್, ಮುಖ್ಯ ಸಚೇತಕ ಎನ್.ರವಿಕುಮಾರ್, ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಕು.ಮಂಜುಳಾ, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಗುರುರಾಜ್ ಗಂಟಿಹೊಳೆ, ವಿಧಾನಪರಿಷತ್ ಸದಸ್ಯೆ ಶ್ರೀಮತಿ ಭಾರತಿ ಶೆಟ್ಟಿ, ಮುಖಂಡರಾದ ಎಂ.ಬಿ.ಭಾನುಪ್ರಕಾಶ್, ಕುಮಾರ್ ಬಂಗಾರಪ್ಪ, ಶಾಸಕರು, ಮಾಜಿ ಶಾಸಕರು, ಪಕ್ಷದ ರಾಜ್ಯ, ಜಿಲ್ಲಾ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಜೆಡಿಎಸ್ ಮುಖಂಡರು ವೇದಿಕೆಯ ಮೇಲಿದ್ದರು.