ಅಬುಧಾಬಿ :
ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಫೆ.13) ಯುಎಇಗೆ ಭೇಟಿ ನೀಡಿದ್ದಾರೆ, ಮೋದಿ ಅವರನ್ನು ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಸ್ವಾಗತಿಸಿದ್ದಾರೆ, ಈ ವೇಳೆ ಇಬ್ಬರು ಆತ್ಮೀಯ ಅಪ್ಪುಗೆಯನ್ನು ಹಂಚಿಕೊಂಡಿದ್ದು, ಎರಡು ದಿನಗಳ ಯುಎಇ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಾಜತಾಂತ್ರಿಕ ಮಾತುಕತೆಗಳನ್ನು ನಡೆಸಲಿದ್ದಾರೆ.

ಪ್ರಧಾನಿ ಮೋದಿ ಅವರಿಗೆ ಅಲ್ಲಿನ ಸೈನ್ಯ ಮಹತ್ವದ ಗೌರವವನ್ನು ನೀಡಿದೆ. ಇಬ್ಬರು ನಾಯಕರು ಉಭಯ ಕುಶಲೋಪರಿಯನ್ನು ನಡೆಸಿದ್ದು, ಈ ಸಮಯದಲ್ಲಿ ಮೋದಿ ಅವರು ಅಬುಧಾಬಿಯಲ್ಲಿ ಹಿಂದೂ ದೇವಾಲಯದ ನಿರ್ಮಾಣಕ್ಕಾಗಿ ಅವಕಾಶ ನೀಡಿದಕ್ಕೆ ಯುಎಇ ಅಧ್ಯಕ್ಷರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ನಿಮ್ಮ ಬೆಂಬಲವಿಲ್ಲದೆ ಇಲ್ಲಿ ಬೋಚ ಸನ್ವಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥಾ ದೇವಾಲಯದ ನಿರ್ಮಾಣ ಸಾಧ್ಯವಾಗುತ್ತಿರಲಿಲ್ಲ ಎಂದು ಪ್ರಧಾನಿ ಮೋದಿ ಹೇಳಿದರು.

ಪ್ರಧಾನಿ ಮೋದಿ ಅವರು ಈ ವೇಳೆ ಅಬುಧಾಬಿ ನಗರದಲ್ಲಿ ಯುಪಿಐ ರುಪೇ ಕಾರ್ಡ್ ಸೇವೆಯನ್ನು ಪರಿಚಯಿಸಿದರು. ಇದರ ಜತೆಗೆ ಅನೇಕ ರಾಜತಾಂತ್ರಿಕ ವಿಚಾರಗಳ ಬಗ್ಗೆ ಚರ್ಚಿಸಲಿದ್ದಾರೆ.