ದೆಹಲಿ : ಬಿಜೆಪಿ ಹಿರಿಯ ನಾಯಕ, ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಮೋದಿ ನಿಧನರಾಗಿದ್ದಾರೆ, ಸೋಮವಾರ ಸಂಜೆ 72 ನೇ ವಯಸ್ಸಿನಲ್ಲಿ ನಿಧನರಾದರು. ಈ ವರ್ಷದ ಏಪ್ರಿಲ್‌ನಲ್ಲಿ ಅವರಿಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು.
ಸುಶೀಲ್ ಕುಮಾರ್ ಮೋದಿ ಅವರು ನಿತೀಶ್ ಕುಮಾರ್ ನೇತೃತ್ವದ ಬಿಜೆಪಿ-ಜೆಡಿಯು ಸರ್ಕಾರದಲ್ಲಿ ಜುಲೈ 2017 ರಿಂದ ನವೆಂಬರ್ 2020 ರವರೆಗೆ ಬಿಹಾರದ ಉಪ ಮುಖ್ಯಮಂತ್ರಿಯಾಗಿದ್ದರು.
ತಮ್ಮ ಅನಾರೋಗ್ಯದ ಕಾರಣದಿಂದಾಗಿ 2024 ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಬಹಿರಂಗಪಡಿಸಿದ್ದರು.
ರಾಜ್ಯಸಭಾ ಮಾಜಿ ಸಂಸದರಾದ ಅವರ ಪಾರ್ಥಿವ ಶರೀರವನ್ನು ಮೇ 14 ರಂದು ಪಾಟ್ನಾದ ರಾಜೇಂದ್ರ ನಗರ ಪ್ರದೇಶದಲ್ಲಿರುವ ಅವರ ನಿವಾಸಕ್ಕೆ ತರಲಾಗುವುದು ಮತ್ತು ನಂತರ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಗುವುದು.