Join The Telegram | Join The WhatsApp |
ಬೆಳಗಾವಿ :
ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಬಿ.ವಿ. ಬೆಲ್ಲದ ಕಾನೂನು ಕಾಲೇಜಿನ ಬಿಎಎಲ್ ಎಲ್ ಬಿ ಮೊದಲ ವರ್ಷದ ವಿದ್ಯಾರ್ಥಿ ಜ್ಞಾನೇಶ್ವರ್ ದುಕ್ಕರವಾಡಕರ್ ಅವರು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿಯಿಂದ ವಿಶ್ವವಿದ್ಯಾಲಯದ ಬ್ಲೂಸ್ ಆಗಿ ಆಯ್ಕೆಯಾಗಿದ್ದಾರೆ.
ಜೊತೆಗೆ ಇವರು ಚೆನ್ನೈನ ಟಿಎನ್ ಪಿ ಇಎಸ್ ವಿಶ್ವವಿದ್ಯಾಲಯದಲ್ಲಿ ಜನವರಿ 9 ರಿಂದ 12 ರವರೆಗೆ ನಡೆಯುವ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ನಲ್ಲಿಯೂ ಭಾಗವಹಿಸಲಿದ್ದಾರೆ.
ವಿದ್ಯಾರ್ಥಿಯ ಸಾಧನೆಗೆ ಕೆಎಲ್ ಇ ಸಂಸ್ಥೆ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ, ಕೆಎಲ್ ಇ ಸಂಸ್ಥೆ ಹಾಗೂ ಬಿ.ವಿ. ಬೆಲ್ಲದ ಮಹಾವಿದ್ಯಾಲಯದ ಆಡಳಿತ ಮಂಡಳಿ, ಪ್ರಾಚಾರ್ಯರು, ಸಿಬ್ಬಂದಿ, ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
Join The Telegram | Join The WhatsApp |