ಗೋಕಾಕ :
ರಾತ್ರಿ ವೇಳೆ ಭೀಕರ ಸಿಲಿಂಡರ್ ಸ್ಪೋಟಗೊಂಡ ಘಟನೆ ಗೋಕಾಕ ತಾಲೂಕಿನ ‌ಅಕ್ಕತಂಗೇರಹಾಳ ಗ್ರಾಮದಲ್ಲಿ ಘಟನೆ ನಡೆದಿದೆ.

ಸಿಲಿಂಡರ್ ಸ್ಪೋಟದ ರಭಸಕ್ಕೆ ಮನೆಯ ಹಂಚುಗಳು ಹಾರಿ ಹೋಗಿವೆ. ಮನೆಯಲ್ಲಿರುವ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ.

9 ತಿಂಗಳ ಹಸಗೂಸು ಸೇರಿ ಒಂದೇ ಕುಟುಂಬದ 7 ಜನರಿಗೆ ಗಂಭೀರ ಗಾಯಗಳಾಗಿವೆ.

ರಾತ್ರಿ ಮಲಗಿರುವಾಗ ಸಿಲಿಂಡರ್ ಸೋರಿಕೆಯಾಗಿದೆ. ವಾಸನೆ ಕಂಡು ಮೊಬೈಲ್ ಟಾರ್ಚ್ ಆನ್ ಮಾಡಿ ನೋಡಲು ಹೋದಾಗ ಏಕಾಏಕಿ ‌ಸಿಲಿಂಡರ್ ಸ್ಪೋಟಗೊಂಡಿದೆ.

ರಾಜಶ್ರೀ ನಿರ್ವಾಣಿ (42), ಅಶೋಕ ನಿರ್ವಾಣಿ (45), ಸೋಮನಗೌಡ (44), ದೀಪಾ (42) ನವೀನ (14), ವಿದ್ಯಾ (13) ಬಸನಗೌಡ ನಿರ್ವಾಣಿ( 9 ತಿಂಗಳು) ಗಾಯಗೊಂಡವರು.

ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದೆ, ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ‌ದಾಖಲಾಗಿದೆ.

ಇನ್ನುಳಿದವರಿಗೆ ಸ್ಥಳೀಯ ಆಸ್ಪತ್ರೆಗೆ ‌ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಂಕಲಗಿ ಪೊಲೀಸ್ ‌ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.