ಬೆಳಗಾವಿ : ಟಿಪ್ಪರ್ ಬೈಕ್ ಸವಾರರಿಗೆ ಗುದ್ದಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬಸವನಕುಡಚಿ ಬಳಿ ಶನಿವಾರ ನಡೆದಿದೆ.

ಬಸವನಕುಡಚಿ ಚೆಕ್ ಪೋಸ್ಟ್ ಬಳಿ ಘಟನೆ ನಡೆದಿದೆ. ಟಿಪ್ಪರ್ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಘಟನಾ ಸ್ಥಳದಲ್ಲಿ ಸವಾರನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಮಾಳ ಮಾರುತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.