
ಹೆಬ್ರಿ : ರಾಯಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಚರಣೆಯಲ್ಲಿ 11 ಜನ ಮೃತಪಟ್ಟು 50 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಈ ಸಂದರ್ಭದಲ್ಲಿ ಇಂದಿರಾನಗರ ಮದಗ ಮನೆ ಶಾಂತ ಶೆಟ್ಟಿ ಮತ್ತು ಉಪ್ಪಿನಂಗಡಿ ಕರುಣಾಕರ ಶೆಟ್ಟಿ ದಂಪತಿಯ ಪುತ್ರಿ ಚಿನ್ಮಯಿ ಶೆಟ್ಟಿ (19)ಮೃತಪಟ್ಟಿದ್ದಾರೆ. ಅವರ ಕುಟುಂಬ ಬೆಂಗಳೂರಿನ ತಿಪ್ಪಸಂದ್ರದಲ್ಲಿ ವಾಸವಾಗಿದೆ. ಕನಕಪುರ ರಸ್ತೆಯಲ್ಲಿರುವ ಜ್ಯೋತಿ ಇಂಜಿನಿಯರಿಂಗ್ ಕಾಲೇಜಿನ ಚಿನ್ಮಯಿ ವ್ಯಾಸಂಗ ಮಾಡುತ್ತಿದ್ದು, ಆರ್‌ಸಿಬಿ ಅಭಿಮಾನಿಯಾಗಿರುವ ಅವರು ಆರ್‌ಸಿಬಿ ತಂಡದ ಸಂಭ್ರಮಾಚರಣೆ ಸಂದರ್ಭದಲ್ಲಿ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಸಿಕ್ಕು ಮೃತಪಟ್ಟಿದ್ದಾರೆ.