ಪುಣೆ: ಯುವತಿಯ ಸ್ನೇಹಿತನನ್ನು ಥಳಿಸಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಪುಣೆಯಲ್ಲಿ ನಡೆದಿದೆ. ಪುಣೆಯ ಹೊರವಲಯದಲ್ಲಿ ಯುವತಿಯ ಸ್ನೇಹಿತನನ್ನು ಥಳಿಸಿ ಆಕೆಯ ಮೇಲೆ ಮೂವರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಬೋಪದೇವ್ ಘರ್ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆ ತನ್ನ ಸ್ನೇಹಿತನ ಜತೆ ಬೋಪ್ದೇವ್ ಗಢ ಪ್ರದೇಶಕ್ಕೆ ಹೋಗಿದ್ದರು, ಅಲ್ಲಿ ಮೂವರು ಅಪರಿಚಿತರು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ.
ಸಾಮೂಹಿಕ ಅತ್ಯಾಚಾರದ ಹಿಂದಿನ ಆರೋಪಿಗಳ ಪತ್ತೆಗೆ 10 ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರತ್ಯೇಕ ಸ್ಥಳದಲ್ಲಿ ಘಟನೆ ನಡೆದಿದ್ದು, ಮೂವರು ಯುವತಿಯ ಸ್ನೇಹಿತನ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ಕೊಂಧ್ವಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮತ್ತೊಂದು ಘಟನೆ –
ಶಾಲಾ ವ್ಯಾನ್‌ನಲ್ಲಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ:
ಪುಣೆ ನಗರದಲ್ಲಿ ಇಬ್ಬರು ಆರು ವರ್ಷದ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಶಾಲಾ ವ್ಯಾನ್‌ನ 45 ವರ್ಷದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.ಸೆ.30ರಂದು ನಗರದ ವನವಾಡಿ ಪ್ರದೇಶದಲ್ಲಿ ಬಾಲಕಿಯರು ಶಾಲೆಗೆ ತೆರಳಿ ಮನೆಗೆ ಮರಳುತ್ತಿದ್ದ ವೇಳೆ ವ್ಯಾನ್‌ನಲ್ಲಿ ಈ ಘಟನೆ ನಡೆದಿದೆ. ಈ ವೇಳೆ ವ್ಯಾನ್‌ನಲ್ಲಿ ಮಹಿಳಾ ಅಟೆಂಡೆಂಟ್ ಇದ್ದರೇ ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಆರೋಪಿಯು ಇಬ್ಬರು ಬಾಲಕಿಯರ ಖಾಸಗಿ ಭಾಗಗಳನ್ನು ಮುಟ್ಟಿದ್ದಾರೆ. ವಿದ್ಯಾರ್ಥಿನಿಯೊಬ್ಬಳು ತನ್ನ ತಾಯಿಗೆ ಘಟನೆಯನ್ನು ವಿವರಿಸಿದಳು, ನಂತರ ಅವರು ಪೊಲೀಸರಿಗೆ ಮಾಹಿತಿ ನೀಡಿದರು ಮತ್ತು ಪ್ರಕರಣವನ್ನು ದಾಖಲಿಸಲಾಗಿದೆ ಎಂದು ವಾನ್ವಾಡಿ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.