ಬೆಂಗಳೂರು : ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಎನ್ ಡಿ ಎ ಅಭ್ಯರ್ಥಿಯನ್ನಾಗಿ ನಿಖಿಲ್ ಕುಮಾರಸ್ವಾಮಿ ಆಯ್ಕೆ ಮಾಡಲಾಗಿದೆ. ಇದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬೆಂಬಲವೂ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದರು.
ಬೆಂಗಳೂರಿನಲ್ಲಿ ಜೆಡಿಎಸ್-ಬಿಜೆಪಿ ನಾಯಕರ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಎನ್ ಡಿ ಎ ಅಭ್ಯರ್ಥಿಯನ್ನಾಗಿ ನಿಖಿಲ್ ಕುಮಾರಸ್ವಾಮಿ ಆಯ್ಕೆ ಮಾಡಲಾಗಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಬೆಂಬಲ ಹಾಗೂ ಆಶೀರ್ವಾದವೂ ಇದೆ. ಇಲ್ಲಿ ಸ್ಪರ್ಧೆ ಅಷ್ಟೇ ಅಲ್ಲ, ನೂರಕ್ಕೂ ನೂರು ಗೆಲ್ಲುತ್ತೇವೆ. ನಮಗೆ ಸಂಪೂರ್ಣ ವಿಶ್ವಾಸ ಇದೆ. ಜೆಡಿಎಸ್ ಬಿಜೆಪಿ ನಾಯಕರು ಪ್ತವಾಸ ಮಾಡ್ತೇವೆ. ಪಕ್ಷಾಂತರ ಮಾಡಿದವರ ಬಗ್ಗೆ ಮಾತಾಡಲ್ಲ. ಅನಾವಶ್ಯಕ ವಿಚಾರ ಚರ್ಚೆ ಮಾಡಲ್ಲ. ಎಲ್ಲ ಆಯಾಮಗಳಲ್ಲಿಯೂ ಚರ್ಚೆ ಮಾಡಿ ತೀರ್ಮಾನ ಮಾಡಿದ್ದೇವೆ ಎಂದು ಹೇಳಿದರು.
ಸ್ವತಃ ಡಾ. ಮಂಜುನಾಥ ಅವರೇ ಯೋಗೇಶ್ವರ್‌ಗೆ ಕರೆ ಮಾಡಿ ಬಿಜೆಪಿಯಿಂದ ಟಿಕೆಟ್ ಕೊಡಲಾಗುತ್ತದೆ ಎಂದು ತಿಳಿಸಿದ್ದರು. ಆದರೆ, ಮೈತ್ರಿಯನ್ನು ಮುರಿದು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರು. ಈ ಹಿನ್ನೆಲೆಯಲ್ಲಿ ಮೈತ್ರಿ ಧರ್ಮಕ್ಕೆ ಆದ್ಯತೆ ಕೊಟ್ಟು ಯಡಿಯೂರಪ್ಪ ಅವರೊಂದಿಗೆ ಚರ್ಚೆ ಮಾಡಿದ ಬಳಿಕ ಇದೀಗ ನಿಖಿಲ್ ಅವರನ್ನು ಕಣಕ್ಕಿಳಿಸಲಾಗಿದೆ. ಕೆಲ ಬೆಳವಣಿಗೆ ಹಿನ್ನೆಲೆಯಲ್ಲಿ ಎನ್ ಡಿ ಎ ಅಭ್ಯರ್ಥಿ ಮಾಡಲಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.