ಬೆಂಗಳೂರು: ಕನ್ನಡದ ಕಿರುತೆರೆ ನಟ ಕಿರಣ್ ರಾಜ್ ಕಾರು ಅಪಘಾತಕ್ಕೀಡಾಗಿದೆ. ಕನ್ನಡತಿ ಸೀರಿಯಲ್ ಮೂಲಕ ಜನರ ಮನೆಮಾತಾಗಿದ್ದ ಕಿರಣ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದರು. ಇನ್ನೇನು ಸಿನಿಮಾ ರಿಲೀಸ್‌ಗೆ ಕೆಲವೇ ದಿನಗಳಿವೆ ಎನ್ನುವಾಗ ಭೀಕರ ಅಪಘಾತವಾಗಿದೆ.

ಕಿರಣ್ ರಾಜ್ ಎದೆ ಭಾಗಕ್ಕೆ ಪೆಟ್ಟಾಗಿದ್ದು, ಕಾರಿಗೆ ಹಾನಿ ಆಗಿದೆ. ಕಿರಣ್ ರಾಜ್‌ಗೆ ಕೆಂಗೇರಿ ಬಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಪಾರಾಗಿದ್ದಾರೆ. ಅವರ ನಟನೆಯ ‘ರಾನಿ’ ಸಿನಿಮಾ ಈ ವಾರ ರಿಲೀಸ್ ಆಗಬೇಕಿತ್ತು. ಅದಕ್ಕೂ ಮೊದಲು ಈ ರೀತಿ ಆಗಿದೆ.

ಕಿರಣ್‌ ರಾಜ್ ಅವರು ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡುತ್ತಾ ಬರುತ್ತಿದ್ದಾರೆ. ಅವರು ಸಿದ್ದೇಶ್ವರ ನಿರಾಶ್ರಿತರ ಕೇಂದ್ರಕ್ಕೆ ಕಿರಣ್ ರಾಜ್ ತೆರಳಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಅವರು ಓಡಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರಿನ ಬಲಭಾಗಕ್ಕೆ ಹಾನಿ ಆಗಿದೆ. ಸದ್ಯ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.