ಬೆಳಗಾವಿ:
ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳುವುದರಿಂದ, ವಾ.ಕ.ರ.ಸಾ.ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಸುಮಾರು 130 ಹೆಚ್ಚುವರಿ ವಿಶೇಷ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ.

ಡಿಸೆಂಬರ್ 23 ನಾಲ್ಕನೇ ಶನಿವಾರ, ಡಿ.24 ಭಾನುವಾರ ಮತ್ತು ಡಿ.25 ಸೋಮವಾರ ಕ್ರಿಸ್‌ಮಸ್ ಹಬ್ಬ ಇರುವುದರಿಂದ ಬೆಂಗಳೂರು ಮತ್ತು ಇತರೇ ಪ್ರಮುಖ ಸ್ಥಳಗಳಿಂದ ಹೆಚ್ಚಿನ ಪ್ರಯಾಣಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ಹೆಚ್ಚುವರಿ ವಿಶೇಷ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುವುದು.

ಬೆಂಗಳೂರಿನಿಂದ ರಾಜ್ಯ/ಅಂತರರಾಜ್ಯದ ವಿವಿಧ ಸ್ಥಳಗಳಿಗೆ ತೆರಳಲು ದಿನಾಂಕ: 22 ರಿಂದ 24 ರವರೆಗೆ ಹೆಚ್ಚುವರಿ ವಿಶೇಷ ಸಾರಿಗೆ ಸೌಲಭ್ಯವನ್ನು ಕಲ್ಪಿಸಲಾಗಿದೆ. ಹಬ್ಬ ಮುಗಿದ ಮೇಲೆ ಡಿಸೆಂಬರ್ 25 ರಂದು ಮತ್ತು ನಂತರದ ದಿನಗಳಂದು ಪ್ರಮುಖ ಸ್ಥಳಗಳಿಂದ ಜನದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗುವುದು.

ಸಾರ್ವಜನಿಕರು ವಿಶೇಷ ಸಾರಿಗೆಗಳ ಸದುಪಯೋಗ ಪಡೆದುಕೊಳ್ಳುಬೇಕು ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.