ಬೆಂಗಳೂರು ; ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಆರೋಪ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಸಿದ್ದರಾಮಯ್ಯ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 2 ರ ಮಧ್ಯಾಹ್ನ 2:30ಕ್ಕೆ ಮುಂದೂಡಿದೆ. ಸ್ನೇಹಮಯಿ ಕೃಷ್ಣ ಪರ ಹಿರಿಯ ವಕೀಲ ಕೆ.ಜಿ. ರಾಘವನ್ ವಾದ ಮಂಡನೆಗೆ ಅವಕಾಶ ಬೇಕೆಂದು ಕೋರಿದ್ದರು. ಹೀಗಾಗಿ ವಿಚಾರಣೆ ಮುಂದೂಡಲಾಯಿತು.