ಬೆಂಗಳೂರು : ವಿದ್ಯುತ್ ದರ ಪರಿಷ್ಕರಣೆಯಾದರೂ ಗೃಹ ಜ್ಯೋತಿ ಉಚಿತ ವಿದ್ಯುತ್ ಬಳಕೆದಾರರಿಗೆ ಇದರ ಹೊರೆ ತಟ್ಟುವುದಿಲ್ಲ. 15 ವರ್ಷಗಳ ನಂತರ ರಾಜ್ಯದಲ್ಲಿ ಮಾಡಲಾಗಿರುವ ಭಾರಿ ವಿದ್ಯುತ್ ದರ ಕಡಿತ ಇಂದಿನಿಂದ ಜಾರಿಯಾಗುತ್ತಿದೆ.
ಕರ್ನಾಟಕ ರಾಜ್ಯ ವಿದ್ಯುಚ್ಛಕ್ತಿ ನಿಯಂತ್ರಣ ಆಯೋ
ಗ ವಿದ್ಯುತ್ ಪರಿಷ್ಕರಿಸಿರುವ ಆದೇಶ ಏ.1ರಿಂದ ಜಾರಿಯಾಗಲಿದ್ದು, 100 ಯುನಿಟ್‌ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡುವವರಿಗೆ ಪ್ರತಿ ಯುನಿಟ್‌ಗೆ 1.10 ರೂ. ಕಡಿಮೆಯಾಗಲಿದೆ.
15 ವರ್ಷಗಳ ಬಳಿಕ ರಾಜ್ಯದಲ್ಲಿ ವಿದ್ಯುತ್ ದರ ಕಡಿಮೆಯಾಗಿದ್ದು, 2024-25ನೇ ಸಾಲಿಗೆ ಅನ್ವಯವಾಗುವಂತೆ ಕೆಇಆರ್‌ಸಿ ಮಾಡಿರುವ ದರ ಪರಿಷ್ಕರಣೆ ಆದೇಶದಲ್ಲಿ ಈವರೆಗೆ ಎಲ್ಲ ಎಸ್ಕಾಂಗಳ ವ್ಯಾಪ್ತಿಯಲ್ಲಿ 0-100 ವರೆಗಿನ ಯುನಿಟ್ ಹಾಗೂ 100ಕ್ಕಿಂತ ಹೆಚ್ಚು ಯುನಿಟ್ ಬಳಕೆಗೆ ಪ್ರತ್ಯೇಕವಾಗಿದ್ದ ಎಲ್.ಟಿ. ಗೃಹಬಳಕೆ ಶುಲ್ಕದ ಸ್ಲ್ಯಾಬ್ ರದ್ದು ಪಡಿಸಲಾಗಿದೆ.
ವಿದ್ಯುತ್ ದರ ಪರಿಷ್ಕರಣೆಯಾದರೂ ಗೃಹ ಜ್ಯೋತಿ ಉಚಿತ ವಿದ್ಯುತ್ ಬಳಕೆದಾರರಿಗೆ ಇದರ ಹೊರೆ ತಟ್ಟುವುದಿಲ್ಲ. ಯಾಕೆಂದರೆ, ಗೃಹಜ್ಯೋತಿಗೆ ಇರುವ ಷರತ್ತುಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಗೃಹಜ್ಯೋತಿ ಯೋಜನೆಗೆ ವಾರ್ಷಿಕ ಸರಾಸರಿ ಮಾನದಂಡವಿದೆ. 12 ತಿಂಗಳ ಸರಾಸರಿ ಪಡೆದುಕೊಂಡು ಅದರ ಮೇಲೆ 10 ಯುನಿಟ್ ಉಚಿತವಾಗಿ ನೀಡಲಾಗುತ್ತದೆ. ಉದಾಹರಣೆಗೆ, ಕಳೆದ ವರ್ಷ ಸರಾಸರಿ ತಿಂಗಳಿಗೆ 100 ಯೂನಿಟ್ ಬಳಸುತ್ತಿದ್ದವರು ಈಗ 110 ಯೂನಿಟ್ ಬಳಸಿದರೆ ವಿದ್ಯುತ್ ಬಿಲ್ ಬರುವುದಿಲ್ಲ. ಅದೇ ರೀತಿ ಸರಾಸರಿ ಐವತ್ತು ಯುನಿಟ್ ಬಳಸುತ್ತಿದ್ದವರಿಗೆ 60 ಯುನಿಟ್ ವರೆಗೆ ಫ್ರೀ ಸಿಗಲಿದೆ. ಹೀಗೆ 200 ಯೂನಿಟ್ ವರೆಗೆ ವಿದ್ಯುತ್ ಬಳಸುವವರು ಬಿಲ್ ಕಟ್ಟುವಂತಿಲ್ಲ. 200 ಯುನಿಟ್‌ಗಿಂತ ಹೆಚ್ಚು ವಿದ್ಯುತ್ ಬಳಸುವವರಿಗೆ ಬಿಲ್ ಬರುತ್ತದೆ.