ಬೆಂಗಳೂರು: ಕಾಂಗ್ರೆಸ್ ವರಿಷ್ಠೆ ಪ್ರಿಯಾಂಕಾ ಗಾಂಧಿ ಕರ್ನಾಟಕ ಚುನಾವಣಾ ಪ್ರಚಾರಕ್ಕೆ ಆಗಮಿಸುವರು. ಏ.24 ರಂದು ಬಹಿರಂಗ ಪ್ರಚಾರಕ್ಕೆ ಕೊನೆಯ ದಿನ. ಆದರೆ ಅದಕ್ಕೆ ಒಂದು ದಿನ ಮುಂಚೆ ಅಂದರೆ ಏ.23ರಂದು ಪ್ರಿಯಾಂಕಾ ಗಾಂಧಿ ರಾಜ್ಯಕ್ಕೆ ಭೇಟಿ ನೀಡಲಿದ್ದು, ಚಿತ್ರದುರ್ಗ ಮತ್ತು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮತ ಯಾಚಿಸಲಿದ್ದಾರೆ.