ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ
ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ಜಾತಿಗಣತಿ ವರದಿಯ ಅಂಶಗಳನ್ನು ಲೋಕಸಭೆ ಚುನಾವಣೆ ಬಳಿಕ ಸಾರ್ವಜನಿಕಗೊಳಿಸಲಾಗುತ್ತದೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರ ವರದಿಯನ್ನು ಸ್ವೀಕರಿಸಿದ್ದು, ಅಂಕಿ-ಅಂಶಗಳು, ಮಾಹಿತಿ ಯನ್ನು ಸಾರ್ವಜನಿಕಗೊಳಿಸಿಲ್ಲ. ಹೀಗಾಗಿ, ಈಗಲೇ ವಿರೋಧ ಮಾಡುವುದರಲ್ಲಿ ಅರ್ಥವಿಲ್ಲ. ಮಾಹಿತಿ ಬಹಿರಂಗವಾದ ಬಳಿಕ ಚರ್ಚೆ ಮಾಡಬಹುದು ಎಂದರು.