ಬೆಳಗಾವಿ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಸ್ಟಡಿ ಸರ್ಕಲ್ ಯೋಜನೆಯಡಿ ಫೆ. 13 ರಿಂದ ಫೆ.17 ವರೆಗೆ ಬೆಳಗ್ಗೆ 10.30 ರಿಂದ ಸಂಜೆ 5 ಗಂಟೆವರೆಗೆ ಅಗ್ನಿವೀರ್ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷಾಪೂರ್ವ ಉಚಿತ ತರಬೇತಿ ಕಾರ್ಯಕ್ರಮವನ್ನು ಶೆಟ್ಟಿ ಗಲ್ಲಿಯ ಟಾರ್ಗೆಟ್ ಕೋಚಿಂಗ್ ಸೆಂಟರ್‌ನಲ್ಲಿ ಆಯೋಜಿಸಲಾಗಿದೆ.
ತರಬೇತಿ ಉಚಿತವಾಗಿದ್ದು, ಅರ್ಹ ಮತ್ತು ಆಸ್ತಕ ಅಭ್ಯರ್ಥಿಗಳು ವೆಬ್‌ಸೈಟ್‌ನಲ್ಲಿ ಹೆಸರನ್ನು ನೋಂದಾಣಿ ಮಾಡಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಕಚೇರಿಗೆ ಖುದ್ದಾಗಿ ಅಥವಾ ದೂರವಾಣಿ ೯೧೦೮೦೮೮೫೭೭, ೭೯೭೫೮೫೬೫೬೬ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.