This is the title of the web page
This is the title of the web page

Live Stream

March 2023
S M T W T F S
 1234
567891011
12131415161718
19202122232425
262728293031  

| Latest Version 9.4.1 |

State News

AIMS ಧಾರವಾಡ ಜತೆ ರಾಯಚೂರು ಹಗ್ಗ ಜಗ್ಗಾಟ-ಬೀದಿಗಿಳಿದ ಜನ !

Join The Telegram Join The WhatsApp

ನ್ಯಾಯಯುತವಾಗಿ ರಾಯಚೂರಿಗೆ ಸಿಗಬೇಕಾಗಿದ್ದ ಏಮ್ಸ್ ಇದೀಗ ಧಾರವಾಡಕ್ಕೆ ಹೋಗುವ ಎಲ್ಲಾ ಸೂಚನೆ ದೊರೆತಿವೆ. ಇದರಿಂದ ಆಕ್ರೋಶ ರಾಗಿರುವ ಆಕ್ರೋಶಿತರಾಗಿರುವ ರಾಯಚೂರು ಜನತೆ ಬೀದಿಗಿಳಿದು ಹೋರಾಟ ನಡೆಸುತ್ತಿದ್ದು ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ಧ ಸಿಡಿದಿದ್ದಾರೆ

ರಾಯಚೂರು: 

ಕಲ್ಯಾಣ ಕರ್ನಾಟಕದ ರಾಯಚೂರಿಗೆ ಏಮ್ಸ್ ಬೇಕು ಎಂದು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಪ್ರಾರಂಭಿಸಿ ಮಂಗಳವಾರಕ್ಕೆ ಬರೊಬ್ಬರಿ 250 ದಿನಗಳು ಪೂರೈಸಿದ್ದರೂ ಸರಕಾರ ಸ್ಪಂದಿಸದ್ದಕೆ ಹೋರಾಟಗಾರರು ಬೃಹತ್ ಪ್ರತಿಭಟನೆ ನಡೆಸಿದರು. “ಬೇಕೇ ಬೇಕು ಏಮ್ಸ್ ಬೇಕು. ನ್ಯಾಯ ಬೇಕು ಎಂದು ರಸ್ತೆ ತಡೆ ನಡೆಸಿ ಘೋಷಣೆ ಕೂಗಿ ಟೈರ್ ಸುಟ್ಟು ಆಕ್ರೋಶ ವ್ಯಕ್ತ ಪಡಿಸಿದರು.

ರಾಯಚೂರು ನಗರದಲ್ಲಿ ಕಳೆದ 250ದಿನಗಳಿಂದ ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಸ್ಥಾಪನೆಮಾಡಲೇ ಬೇಕು ಎಂದು ಒತ್ತಾಯಿಸಿ ಏಮ್ಸ್ ಹೋರಾಟ ಸಮಿತಿ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು. 250 ದಿನ ಪೂರೈಸಿದ ಹಿನ್ನೆಲೆಯಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಿ ರಸ್ತೆ ತಡೆ ಮಾಡುವ ಮೂಲಕ ನಗರಸಭೆ ಮುಂಭಾಗದಲ್ಲಿ ಮತ್ತು ಬಸವೇಶ್ವರ ವೃತ್ತದಲ್ಲಿ ಟೈರ್ ಗೆ ಬೆಂಕಿ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ

ಸ್ಟೇಷನ್ ವೃತ್ತದಲ್ಲಿರುವ ಬಾಬು ಜಗಜೀವನ ರಾಮ ವೃತ್ತದಿಂದ ಆರಂಭವಾದ ಮೆರವಣಿಗೆ ಅಂಬೇಡ್ಕರ ವೃತ್ತದ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ತಿಸಿದರು. ಜಿಲ್ಲಾಧಿಕಾರಿಗಳು ಸ್ವತಹ ಅವರೆ ಮನವಿ ಪತ್ರ ಸ್ವೀಕರಿಸಲು ಅಗಮಿಸಿದ್ದರಿಂದ ಮುತ್ತಿಗೆ ಕೈಬಿಟ್ಟು, ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ, ಈ ಕುರಿತು ವಿವರವಾದ ಮಾಹಿತಿ ಸರಕಾರದ ಗಮನಕ್ಕೆ ತರಲಾಗುತ್ತದೆ ಎಂದರು.

ರಾಜಕಾರಣಿಗಳಿಂದ ಕುತಂತ್ರ

ಏಮ್ಸ್ ಹೋರಾಟ ಸಮಿತಿ ಪ್ರಧಾನ ಸಂಚಾಲಕ ಬಸವರಾಜ ಕಳಸ ಮಾತನಾಡಿ, ಧಾರವಾಡದ ರಾಜಕಾರಣಿಗಳು ಕುತಂತ್ರದ‌ ಬುದ್ದಿ ತೊರಿಸುತ್ತಿದ್ದಾರೆ. ಚಳಿಗಾಲದ ಅಧಿವೇಶನದಲ್ಲಿ ಜಿಲ್ಲೆಯ ಶಾಸಕರು ಏಮ್ಸ್ ಬಗ್ಹೆ ಧ್ವನಿ ಎತ್ತಿದ್ದರೆ ಮುಖ್ಯ ಮಂತ್ರಿ ಬಸವರಾಜ ಬೋಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಲಿಲ್ಲ. ಬದಲಿಗೆ ಕಾನೂನು ಮಂತ್ರಿ ಮಾಧುಸ್ವಾಮಿ ಮಾತನಾಡಿ ಈಗಾಗಲೇ ಧಾರವಾಡದಲ್ಲಿ ಏಮ್ಸ್ ಸ್ಥಾಪನೆಯಾಗಲಿದ್ದು, ಅದೇ ಮಾದರಿಯಲ್ಲಿ ಇನ್ನೊಂದು ಆಸ್ಪತ್ರೆ ರಾಯಚೂರಿನಲ್ಲಿ ಸ್ಥಾಪನೆ ಮಾಡಲಾಗುತ್ತದೆ ಎಂದು ಪತ್ರ ಬರೆಯಲಾಗಿದೆ ಎಂದು ಸುಧಾಕರ ಅವರು ನೀಡಿದ ಪತ್ರ ವನ್ನು‌ ಶಾಸಕರಿಗೆ ನೀಡಿದ್ದಾರೆ.

ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲೆಗೆ ಎರಡು ಬಾರಿ ಬಂದಾಗ ದೆಹಲಿಗೆ ನಿಮ್ಮ ನಿಯೋಗ ಕರೆದುಕೊಂಡು ಹೋಗುತ್ತೇವೆ ಎಂದು ಹೇಳಿದ್ದರು. ಜನಸಂಕಲ್ಪ ಯಾತ್ರೆಯಲ್ಲಿ ಏಮ್ಸ್ ಸ್ಥಾಪನೆಯಾದರೆ ಅದು ರಾಯಚೂರಿನಲ್ಲಿಯೇ ಏಮ್ಸ್ ಸ್ಥಾಪನೆ ಮಾಡಲಾಗುತ್ತದೆ ಎಂದು ಭರವಸೆ ನೀಡಿದ್ದರು. ಆದರೆ ಸುಳ್ಳು ಭರವಸೆಗಳನ್ನು ಕೊಟ್ಟು ಕುತಂತ್ರದಿಂದ ಏಮ್ಸ್ ಧಾರವಾಡಕ್ಕೆ ತೆಗೆದುಕೊಂಡು ಹೋಗಲು ಪ್ಲಾನ್ ಮಾಡುತ್ತಿದ್ಸಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬುಧವಾರದಿಂದ ಉಪವಾಸ ಸತ್ಯಾಗ್ರಹ

ಬುಧವಾರದಿಂದ 24 ಗಂಟೆ ಉಪವಾಸ ಸತ್ಯಾಗ್ರಹ ಮಾಡಲಾಗುತ್ತದೆ. ಇದಕ್ಕೂ ಕೂಡ ಸರಕಾರ ಗಮನಹರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ಕಠಿಣ ಮಾಡಲಾಗುತ್ತದೆ ಎಂದು ಸರಕಾರಕ್ಕೆ ಎಚ್ಚರಿಕೆ ನೀಡಿದರು.

ಕರವೇ ಜಿಲ್ಲಾದ್ಯಕ್ಷ ಅಶೋಕ ಜೈನ್ ಮಾತನಾಡಿ, ಮುಖ್ಯಮಂತ್ರಿ ಗಳು ಜಿಲ್ಲೆಗೆ ಬಂದಾಗ ಜಿಲ್ಲೆಯಲ್ಲಿ ಏಮ್ಸ್ ಸ್ಥಾಪನೆ ಮಾಡಲಾಗುತ್ತದೆ ಎಂದು ಭರವಸೆ ನಿಡಿದ್ದರು. ಆದರೆ ಇಲ್ಲಿಯವರೆಗೂ ಯಾವುದೇ ಸ್ಫಂದನೆ ಇಲ್ಲ. ಐಐಟಿ

ವಿಚಾರದಲ್ಲಿ ನಮಗೆ ಅನ್ಯಾಯ ಮಾಡಿದ್ದಾರೆ. ಏಮ್ಸ್ ಸ್ಥಾಪನೆ ಮಾಡುವಲ್ಲಿ ಅನ್ಯಾಯ ಮಾಡಿದರೆ ಸುಮ್ಮನಿರುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಬೃಹತ್ ಪ್ರತಿಭಟನೆ ಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಶಾಲಾ ಶಿಕ್ಷಕರು, ಶಿಕ್ಷಕಿಯರು, ಕನ್ನಡ ಪರ ಹೋರಾಟಗಾರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.


Join The Telegram Join The WhatsApp
Admin
the authorAdmin

Leave a Reply