Join The Telegram | Join The WhatsApp |
ಬೆಂಗಳೂರು-
ಜನೇವರಿ 26 ರಂದು ನಡೆಯಲಿರುವ ಗಣರಾಜೋತ್ಸವ ಸಮಾರಂಭಗಳಲ್ಲಿ ಡಾ||ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜನವರಿ 26 ರಂದು ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಶಾಲಾ ಕಾಲೇಜುಗಳಲ್ಲಿ ಆಚರಿಸಲಾಗುವ ಗಣರಾಜ್ಯೋತ್ಸವ ಸಮಾರಂಭಗಳಲ್ಲಿ ಸಂವಿಧಾನದ ಪಿತಾಮಹ, ಭಾರತರತ್ನ ಡಾ|| ಬಿ.ಆರ್.ಅಂಬೇಡ್ಕರ್ ರವರ ಭಾವ ಚಿತ್ರವನ್ನು ಕಡ್ಡಾಯವಾಗಿ ಇಟ್ಟು ಸಮಾರಂಭವನ್ನು ಆಚರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ. ಸರ್ಕಾರದ ಅಧೀನ ಕಾರ್ಯದರ್ಶಿ ಎಸ್.ಎಸ್.ಶಿವಲಿಂಗಯ್ಯ ಆದೇಶ ಹೊರಡಿಸಿದ್ದಾರೆ.
Join The Telegram | Join The WhatsApp |