Join The Telegram | Join The WhatsApp |
ಮಂಗಳೂರು:
ಉಜಿರೆ ಸಮೀಪದ ಪೆರ್ಲದಲ್ಲಿ ಪುರಾತನ ಶಿವಲಿಂಗವೊಂದು ಪತ್ತೆಯಾಗಿರುವುದು ವರದಿಯಾಗಿದೆ.
ಗ್ರಾಮಸ್ಥರಿಂದ ಪುರಾತನ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ನವೀಕರಣಕ್ಕಾಗಿ ಅಷ್ಟಮಂಗಲ ಪ್ರಶ್ನೆ ಇಟ್ಟ ವೇಳೆ ದೇವಸ್ಥಾನದ ಕುರುಹು ಇದ್ದ ಪಕ್ಕದ ಮಣ್ಣಿನಡಿಯಲ್ಲಿ ಪುರಾತನ ಶಿವಲಿಂಗ ಇದೆ ಹೇಳಲಾಗಿತ್ತು. ಅದರಂತೆ ಅಲ್ಲಿ ಅಗೆದಾಗ (ಡಿ.16) ರಂದು ಪುರಾತನ ಶಿವಲಿಂಗ ಪತ್ತೆಯಾಗಿದೆ.
ಡಿಸೆಂಬರ್ 8 , 9, 15 ಮತ್ತು 16ರಂದು ದೈವಜ್ಞರಾದ ನೆಲ್ಯಾಡಿ ಶ್ರೀಧರ ಗೋರೆ ಅವರ ನೇತೃತ್ವದಲ್ಲಿ ಅಷ್ಟಮಂಗಲ ಪ್ರಶ್ನೆ ನಡೆಯುತ್ತಿತ್ತು. ಈ ವೇಳೆ ಆ ಪರಿಸರದಲ್ಲಿ ಶಿವನ ಸಾನಿಧ್ಯವಿದೆ ಎಂದು ಗೋಚರಿಸುತ್ತದೆ ಎಂದು ಹೇಳಿದ್ದರು. ಅಂತೆಯೇ ಅವರು ತಿಳಿಸಿದ ಜಾಗದಲ್ಲಿ ಅಗೆದಾಗ ಮಣ್ಣಿನಡಿಯಲ್ಲಿ ಪುರಾತನ ಶಿವಲಿಂಗವೊಂದು ಕಂಡುಬಂದಿದೆ.
ಇದು ಸುಮಾರು 2 ರಿಂದ 3 ಅಡಿ ಉದ್ದದ ಪಾಣಿಪೀಠ ಮೇಲಿರುವ ಶಿವಲಿಂಗವಾಗಿದೆ. ಸುಮಾರು 400 ರಿಂದ 500 ವರ್ಷಗಳಷ್ಟು ಹಳೆಯ ಶಿವಲಿಂಗವಾಗಿರಬಹುದು ಎಂದು ಹೇಳಲಾಗಿದೆ.
Join The Telegram | Join The WhatsApp |