ಯಾದಗಿರಿ :
ಸುರಪುರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇವರ ನಿಧನದ ಸುದ್ದಿ ತಿಳಿದ ಅಭಿಮಾನಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಸುರಪುರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ನಡೆದಿದೆ.

ಸುದ್ದಿ ಕೇಳಿ ಅಭಿಮಾನಿ ಹನುಮಂತ(65) ಎಂಬಾತರೇ ನಿಧನರಾಗಿದ್ದಾರೆ. ಶಾಸಕರ ನಿಧನಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಸ್ಪೀಕ‌ರ್ ಯು.ಟಿ.ಖಾದರ್ ಸೇರಿ ಮತ್ತಿತರ ನಾಯಕರು ಸಂತಾಪ ಸೂಚಿಸಿದ್ದಾರೆ.

ಕಟ್ಟಾ ಅಭಿಮಾನಿ :
ಮೃತ ಹನುಮಂತ, ರಾಜಾ ವೆಂಕಟಪ್ಪನವರ ಕಟ್ಟಾ ಅಭಿಮಾನಿಯಾಗಿದ್ದರು. ಶಾಸಕರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಹನುಮಂತಗೂ ಹೃದಯಾಘಾತವಾಗಿದೆ.

ರಾಜಾ ವೆಂಕಟಪ್ಪ ನಾಯಕ ನಿಧನದಿಂದಾಗಿ ಸುರಪುರ ಕ್ಷೇತ್ರದಲ್ಲಿ ನೀರವ ಮೌನ ಆವರಿಸಿದೆ. ತಮ್ಮ ಕ್ಷೇತ್ರದ ಶಾಸಕರ ಸಾವಿನ ತಿಳಿಯುತ್ತಿದ್ದಂತೆಯೇ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ರಾಜಾ ವೆಂಕಟಪ್ಪ ನಾಯಕ ಅವರ ಮನೆ ಬಳಿ ಜಮಾಯಿಸಿದ್ದು, ತಮ್ಮ ನೆಚ್ಚಿನ ನಾಯಕನನ್ನ ಕಳೆದುಕೊಂಡು ಕಣ್ಣೀರು ಹಾಕುತ್ತಿದ್ದಾರೆ. ಇನ್ನು ಸುರಪುರದಲ್ಲಿ ಸ್ವಯಂಪ್ರೇರಿತರಾಗಿ ಎಲ್ಲಾ ಅಂಗಡಿ ಮುಂಗಟ್ಟು ಬಂದ್ ಮಾಡಿದ್ದಾರೆ.