Join The Telegram | Join The WhatsApp |
ಬೆಂಗಳೂರು:
ನಿವೃತ್ತ ಅಧಿಕಾರಿಯ ವಿರುದ್ಧ ಆರೋಪಿಸಲಾದ ಘಟನೆಯು ನಡೆದು ನಾಲ್ಕು ವರ್ಷಗಳಿಗೂ ಹೆಚ್ಚು ಕಾಲವಾಗಿದ್ದರೆ ಕರ್ನಾಟಕ ನಾಗರಿಕ ಸೇವೆಗಳ ಕಾನೂನಿನ ನಿಯಮ 214 (2) (ಬಿ)ರ ಅನ್ವಯ ಇಲಾಖಾ ತನಿಖಾ ಪ್ರಕ್ರಿಯೆಯನ್ನು ನಡೆಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ಕರ್ನಾಟಕ ಗೃಹ ಮಂಡಳಿಯಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ಅನಿಲಕುಮಾರ ಹಾಗೂ ಟಿ. ಮಲ್ಲಣ್ಣ ಅವರ ವಿರುದ್ಧ 2006ರಲ್ಲಿ ನಡೆದಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 2022ರ ಜೂನ್ 21ರಂದು ಮೆಮೋ ಜಾರಿಗೊಳಿಸಲಾಗಿತ್ತು.
ಅವರು 2018ರ ಜೂನ್ 30ರಂದು ನಿವೃತ್ತಿರಾಗಿದ್ದಾರೆ ಹಾಗೂ ಮಲ್ಲಣ್ಣ ಎಂಬವರು 2020 ರ ಆಗಸ್ಟ್ 30 ರಂದು ನಿವೃತ್ತರಾಗಿದ್ದರು. ಹೀಗಾಗಿ 2006 ರಂದು ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ಈಗ ಮೆಮೋ ನೀಡಲಾಗಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯನ್ನು ನ್ಯಾಯಮೂರ್ತಿ ಎಸ್ ಜಿ ಪಂಡಿತ ಅವರ ನೇತೃತ್ವದ ಏಕಸದಸ್ಯ ಪೀಠವು ಮಾನ್ಯ ಮಾಡಿದ್ದು, ದೋಷರೋಪ ಮೆಮೊ ಮತ್ತು ತನಿಖಾಧಿಕಾರಿ ನೇಮಕಾತಿಯನ್ನು ವಜಾ ಮಾಡಿದೆ.
ನಾಲ್ಕು ವರ್ಷಗಳ ಹಿಂದೆ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಅರ್ಜಿದಾರರ ವಿರುದ್ಧ ತನಿಖೆ ಆರಂಭಿಸುವುದಕ್ಕೆ ಸಂಬಂಧಿಸಿದಂತೆ ದೋಷಾರೋಪ ಮತ್ತು ತನಿಖಾ ಪ್ರಕ್ರಿಯೆ ಕುರಿತಾದ ಮೆಮೊವನ್ನು 2022ರ ಜೂನ್ 21ರಂದು ಹೊರಡಿಸಲಾಗಿತ್ತು. ಕೆಸಿಎಸ್‌ಆರ್‌ನ ನಿಯಮ 214 (2)(ಬಿ)(ii)ರ ಅಡಿ ತನಿಖೆ ಆರಂಭಿಸಲು ದೋಷಾರೋಪ ಮೆಮೊ ನಿರ್ಬಂಧಿಸಲಾಗಿದೆ. ಹೀಗಾಗಿ, ದೋಷಾರೋಪ ಮೆಮೊ ಅಮಾನ್ಯವಾಗುತ್ತದೆ” ಎಂದು ಪೀಠ ಆದೇಶದಲ್ಲಿ ಹೇಳಿದೆ.
Join The Telegram | Join The WhatsApp |