ಬೆಳಗಾವಿ :
ಬೆಳಗಾವಿ ತಾಲೂಕಿನ ಬಸುರ್ತೆ ಗ್ರಾಮದಲ್ಲಿ ಸುಗಂಧಾ ಮೋರೆ(50) ಎಂಬವರ ಮೇಲೆ ಹಲ್ಲೆ ನಡೆಸಿ ಅವರ ಮೂಗನ್ನು ಕತ್ತರಿಸಿದ ಘಟನೆ ಬೆಳಕಿಗೆ ಬಂದಿದೆ.

ಸುಗಂಧಾ ಇದೀಗ ಚಿಕಿತ್ಸೆ ಪಡೆಯುತ್ತಿದ್ದು ಉಸಿರಾಟ ಹಾಗೂ ತೀವ್ರ ನೋವಿನಿಂದ ಪರದಾಡುತ್ತಿದ್ದಾರೆ. ಅಂಗನವಾಡಿ ಮಕ್ಕಳು ಪಕ್ಕದ ಮನೆಯ ಆವರಣದಲ್ಲಿ ಬೆಳೆದಿದ್ದ ಮಲ್ಲಿಗೆ ಹೂ ಕಿತ್ತಿದ್ದಾರೆ ಎಂಬ ಕ್ಷುಲಕ ಕಾರಣಕ್ಕೆ ಅಂಗನವಾಡಿ ಸಹಾಯಕಿಗೆ ಅವಾಚ್ಯವಾಗಿ ನಿಂದಿಸಿ ಕುಡುಗೋಲಿನಿಂದ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಮನೆ ಮಾಲೀಕ ಕಲ್ಯಾಣಿ ಮೋರೆ ಎಂಬಾತ ಅಂಗನವಾಡಿ ಸಹಾಯಕಿಯ ಮೂಗು ಕತ್ತರಿಸಿದ್ದಾರೆ.

ಅಂಗನವಾಡಿ ಮಕ್ಕಳು ಅಂಗನವಾಡಿ ಪಕ್ಕದಲ್ಲಿ ಇರುವ ಕಲ್ಯಾಣಿ ಮೋರೆಯವರ ಮನೆಯ ಆವರಣದಲ್ಲಿ ಬೆಳೆದಿದ್ದ ಮಲ್ಲಿಗೆ ಹೂ ಕಿತ್ತಿದ್ದರು. ಇದರಿಂದ ಕೋಪಗೊಂಡ ಮನೆಮಾಲೀಕ ಅಂಗನವಾಡಿ ಸಹಾಯಕಿಯ ಮೂಗು ಕತರಿಸಿದ್ದಾನೆ. ಜ.1 ರಂದೇ ಘಟನೆ ನಡೆದಿದೆ.

ಮೂಗ ಗಂಡದೊಂದಿಗೆ ಅಂಗನವಾಡಿ ಸಹಾಯಕಿ ಜೀವನ ಕಟ್ಟಿಕೊಂಡಿದ್ದರು. ಇದೀಗ ಮತ್ತಷ್ಟು ತೊಂದರೆಗೆ ಸಿಲುಕಿದ್ದು ಮೂಗು ಕಟ್ ಆದ ನಂತರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಇದುವರೆಗೆ ಆರೋಪಿ ಕಲ್ಯಾಣಿಯನ್ನು ಪೊಲೀಸರು ಬಂಧಿಸಿಲ್ಲ.