ಬೆಳಗಾವಿ : ಹಾಲಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಅವರು ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಮತ್ತೆ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಕಳೆದ ಬಾರಿ ಅಣ್ಣಾ ಸಾಹೇಬ್ ಜೊಲ್ಲೆ ಅವರಿಗೆ ಬಿಜೆಪಿ ಟಿಕೆಟ್ ನೀಡಿತ್ತು. ಅವರು ಪ್ರಭಾವಿ ಪ್ರಕಾಶ್ ಹುಕ್ಕೇರಿ ಅವರನ್ನು ಸೋಲಿಸಿ ಗೆಲುವು ಸಾಧಿಸಿದ್ದರು. ಇದೀಗ ಮಾಜಿ ಸಂಸದ ರಮೇಶ ಕತ್ತಿ ಅವರನ್ನು ಹಿಂದಿಕ್ಕಿರುವ ಅಣ್ಣಾಸಾಹೇಬ್ ಜೊಲ್ಲೆ ಅವರು ಮತ್ತೊಮ್ಮೆ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಆದರೆ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಹೆಸರು ಘೋಷಣೆಯಾಗಿಲ್ಲ.