ಬೆಳಗಾವಿ : ವಿದ್ಯಾರ್ಥಿಗಳಿಂದ ಮಾತ್ರ ದೇಶ ಕಟ್ಟಲು ಸಾಧ್ಯ. ಅದರ ಮೊದಲ ಭಾಗವಾಗಿ ಶಿಕ್ಷಣ ಸಂಸ್ಥೆ ಕಟ್ಟುವ ಕನಸು ನಮ್ಮದು. ಈ ನಿಟ್ಟಿನಲ್ಲಿ ಪ್ರೇರಣಾ ಸಂಸ್ಥೆಯ ಕನಸು ಕೆಲವೇ ದಿನಗಳಲ್ಲಿ ನನಸಾಗಲಿದೆ ಎಂದು ಸಂಸ್ಥೆಯ ಮುಖ್ಯಸ್ಥ ಗಿರೀಶ ದಂಡಣ್ಣವರ್ ಹೇಳಿದರು.


ಬೆಳಗಾವಿ ನಗರದ ಪ್ರೇರಣಾ ಪೂರ್ವ ಮಹಾವಿದ್ಯಾಲಯದಲ್ಲಿ ಸಂಸ್ಥೆಯ ವಾರ್ಷಿಕೋತ್ಸವ ಹಾಗೂ ಬೀಳ್ಕೊಡುವ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗೆ ಯಾವತ್ತೂ ಗುರಿ ಮತ್ತು ಆತ್ಮವಿಶ್ವಾಸ ಮುಖ್ಯ ಎಂದು ಹೇಳಿದರು.
ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಜಯಶಾಲಿಯಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಪ್ರಾಚಾರ್ಯ ಪ್ರಶಾಂತ ಗೌಡರ ವಾರ್ಷಿಕ ವರದಿ ವಾಚಿಸಿದರು.

ಸಮಾರಂಭದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು ಸಂಸ್ಥೆಯ ಮತ್ತೋರ್ವ ಮುಖ್ಯಸ್ಥ ಅಮಿತ್ ವಾಗರಾಳಿ, ಕಿರಣ್ ಪಾಟೀಲ್, ಸುಪ್ರಿಯ ಹುಂದ್ರೆ ,ಜಯೇಶ್, ನೂರ್ ಜಹಾನ್ ಇತ್ಯಾದಿ ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿ, ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.