Join The Telegram | Join The WhatsApp |
ರಾಯಚೂರು-
ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯದ ಎಲ್ಲೆಡೆ ಪ್ರಮುಖರ ಸಭೆಗಳನ್ನ ನಡೆಸುತ್ತಿದ್ದೇವೆ. ಜನೇವರಿ 15 ರೊಳಗೆ ಕನಿಷ್ಠ 150 ಕ್ಷೇತ್ರಗಳ ಅಭ್ಯರ್ಥಿ ಹೆಸರು ಘೋಷಣೆ ಮಾಡಲು ತಿರ್ಮಾನಿಸಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.
ರಾಯಚೂರಿನ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಾಲಯದಲ್ಲಿ ನಡೆದ ಕಾಂಗ್ರೆಸ್ ಪ್ರಮುಖರ ಸಭೆ ಬಳಿಕ ಮಾತನಾಡಿದ ಅವರು, ರಾಜ್ಯ ಚುನಾವಣಾ ಸಮಿತಿ ಸಭೆಯ ಮಾರ್ಗಸೂಚಿ ಎಲ್ಲರಿಗೆ ಕೊಡಲಾಗಿದೆ. ಕಲ್ಯಾಣ ಕರ್ನಾಟಕದ 41 ಕ್ಷೇತ್ರಗಳಿಗೆ ಸಾವಿರಕ್ಕೂ ಹೆಚ್ಚು ಅರ್ಜಿ ಬಂದಿವೆ. ಎಲ್ಲಾ ಮುಖಂಡರ ಅಭಿಪ್ರಾಯ ಪಡೆದು, ಅಂತಿಮವಾಗಿ ಮೂವರ ಪಟ್ಟಿ ಸಲ್ಲಿಸಲಾಗುವುದು. ಒಂದೊಂದು ಕ್ಷೇತ್ರದಿಂದ ಮೂವರು ಆಕಾಂಕ್ಷಿಗಳ ಹೆಸರನ್ನ ರಾಜ್ಯ ಚುನಾವಣಾ ಸಮಿತಿ ಹಾಗೂ ಎಐಸಿಸಿಗೆ (AICC) ಕಳುಹಿಸುತ್ತೇವೆ ಎಂದಿದ್ದಾರೆ.
Join The Telegram | Join The WhatsApp |