Join The Telegram | Join The WhatsApp |
ಬೆಂಗಳೂರು-
ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಲು ಮುಂದಾಗಿದೆ. ಕುಟುಂಬ ನಿರ್ವಹಣೆಗಾಗಿ ಮಹಿಳೆಯರ ಖಾತೆಗೆ ಹಣ ಹಾಕಲು ಸಿದ್ಧತೆ ನಡೆಸಲಾಗಿದ್ದು, ಮುಂಬರುವ ಬಜೆಟ್ ನಲ್ಲಿ ಇದರ ಘೋಷಣೆಯಾಗುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಈ ಕುರಿತು ಪರೋಕ್ಷ ಸುಳಿವು ನೀಡಿದ್ದು, ಮಹಿಳೆಯರು ಸ್ವತಂತ್ರವಾಗಿ ಮನೆ ನಿರ್ವಹಿಸಲು ಅಗತ್ಯವಿರುವಂತೆ ಆರ್ಥಿಕ ನೆರವನ್ನು ನೀಡಲು ಸರ್ಕಾರ ಚಿಂತನೆ ನಡೆಸಿದೆ. ಬಜೆಟ್ ನಲ್ಲಿ ಈ ಕುರಿತು ಘೋಷಣೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಮೂಲಗಳ ಪ್ರಕಾರ ಮಹಿಳೆಯರಿಗೆ ಅಗತ್ಯ ವೆಚ್ಚ ಭರಿಸಲು ಅನುಕೂಲವಾಗುವಂತೆ ಮಾಸಿಕ ಒಂದು ಸಾವಿರ ರೂಪಾಯಿಗಳಿಂದ ಮೂರು ಸಾವಿರ ರೂಪಾಯಿಗಳವರೆಗೆ ನೆರವು ನೀಡುವ ಯೋಜನೆ ಘೋಷಣೆಯಾಗಲಿದ್ದು, ಇದು ನೇರವಾಗಿ ಮಹಿಳೆಯರ ಖಾತೆಗೆ ಜಮಾ ಆಗಲಿದೆ. ಫೆಬ್ರವರಿ 17ರಂದು ಬಜೆಟ್ ಮಂಡಿಸುವ ಸಾಧ್ಯತೆ ಇದ್ದು, ಅಂದು ಈ ಕುರಿತು ಮಹತ್ವದ ಘೋಷಣೆ ಹೊರಬೀಳಲಿದೆ
Join The Telegram | Join The WhatsApp |