ಬೆಳಗಾವಿಯ ಹಿರಿಯ ರಂಗಕರ್ಮಿ,ಸಾಹಿತಿ
ಬಿ.ಎಸ್.ಗವಿಮಠ ಅವರಿಗೆ
ಕಯ್ಯಾರ ಕಿಞ್ಞಣ್ಣ ರೈ ಹೆಸರಿನಲ್ಲಿ ನೀಡುವ ಗಡಿನಾಡ ಚೇತನ ರಾಜ್ಯ ಪ್ರಶಸ್ತಿ ಘೋಷಣೆ

ಬೆಳಗಾವಿ :
ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ
ಪ್ರಾಧಿಕಾರವು ನೀಡುವ ಗಡಿನಾಡ ಚೇತನ
ರಾಜ್ಯ ಪ್ರಶಸ್ತಿಗಳನ್ನು ಇಂದು ಪ್ರಕಟಿಸಿದ್ದು
ಡಾ.ಕಯ್ಯಾರ ಕಿಞ್ಞಣ್ಣ ರೈ ಅವರ ಹೆಸರಿನಲ್ಲಿ
ನೀಡುವ ಪ್ರಶಸ್ತಿಯನ್ನು ಬೆಳಗಾವಿಯ ಹಿರಿಯ ರಂಗಕರ್ಮಿ,ಸಾಹಿತಿ
ಬಿ.ಎಸ್.ಗವಿಮಠ ಅವರಿಗೆ ನೀಡಲಾಗುತ್ತದೆ.
ಈ ಪ್ರಶಸ್ತಿಯು ಒಂದು ಲಕ್ಷ ರೂ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

 

ನಾಡೋಜ ಬರಗೂರು ರಾಮಚಂದ್ರಪ್ಪ ಹಾಗೂ ಕವಿ ಪತ್ರಕರ್ತ ಡಾ. ಸರಜೂ ಕಾಟ್ಕರ್ ಅವರ ಆಯ್ಕೆ ಸಮಿತಿಯು ಬಿ. ಎಸ್. ಗವಿಮಠ ಅವರ ಹೆಸರನ್ನು ಈ ಪ್ರಶಸ್ತಿಗೆ ಅಂತಿಮಗೊಳಿಸಿತು.

ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ಹಾಗೂ ಸನ್ಮಾನ ಒಳಗೊಂಡಿದೆ. ಆಯ್ಕೆ ಸಮಿತಿಯು ಈ ಮೊತ್ತವನ್ನು ಮೂರು ಲಕ್ಷ ರೂಪಾಯಿಗೆ ಏರಿಸಬೇಕೆಂದು ಮುಖ್ಯ ಮಂತ್ರಿ ಅವರಿಗೆ ಶಿಫಾರಸು ಮಾಡಿದೆ. ಮುಖ್ಯ ಮಂತ್ರಿಯವರು ಅದನ್ನು ಪರಿಶೀಲಿಸುವುದಾಗಿ ಹೇಳಿದ್ದಾರೆ.

ಪ್ರಶಸ್ತಿಯನ್ನು ಮುಖ್ಯ ಮಂತ್ರಿ ಯವರು ಶೀಘ್ರದಲ್ಲಿ ಬೆಂಗಳೂರು ನಲ್ಲಿ ವಿತರಿಸಲಿದ್ದಾರೆ.