ಹುಬ್ಬಳ್ಳಿ: ವಿಜಯವಾಣಿ ದಿನಪತ್ರಿಕೆಯ ಹುಬ್ಬಳ್ಳಿ ಬ್ಯುರೋ ಚೀಫ್ ಪ್ರಕಾಶ ಶೇಟ್ ಅವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಘೋಷಣೆಯಾಗಿದೆ.

ಜೋಯಿಡಾ ಮೂಲದವರಾದ ಪ್ರಕಾಶ ಶೇಟ್ ಅವರು ಕಳೆದ ಎರಡೂವರೆ ದಶಕಗಳಿಂದ ವಿಜಯ ಕರ್ನಾಟಕ, ವಿಶ್ವವಾಣಿ, ವಿಜಯವಾಣಿ ಪತ್ರಿಕೆಗಳಲ್ಲಿ ಉಪಸಂಪಾದಕರು, ವರದಿಗಾರರು ಹಾಗೂ ಬ್ಯೂರೋ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಅವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಈ ಬಾರಿ ಕರ್ನಾಟಕ ಮಾಧ್ಯಮ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ನೀಡಿ ಗೌರವಿಸಲಿದೆ.