Join The Telegram | Join The WhatsApp |
ಮಂಗಳೂರು :
ಉಜಿರೆಯಲ್ಲಿ ಫೆಬ್ರವರಿ 3 ರಿಂದ 5 ರವರೆಗೆ ನಡೆಯುವ 25 ನೇ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹೇಮಾವತಿ ವೀ.ಹೆಗ್ಗಡೆ ಅವರನ್ನು ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉಜಿರೆಯ ರಾಮಕೃಷ್ಣ ಸಭಾ ಮಂಟಪದಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಎಂ.ಪಿ. ಶ್ರೀನಾಥ ತಿಳಿಸಿದ್ದಾರೆ. ಹೇಮಾವತಿ ವೀ. ಹೆಗ್ಗಡೆ ಅವರು ರಾಜ್ಯದ ಲಕ್ಷಾಂತರ ಗ್ರಾಮೀಣ ಮಹಿಳೆಯರಿಗೆ ಸ್ಪೂರ್ತಿ. ಅವರ ದೂರದೃಷ್ಟಿ ಆಲೋಚನೆ ಮತ್ತು ಚಿಂತನೆಗಳು ರಾಜ್ಯಾದ್ಯಂತ ವಿವಿಧ ಮಹಿಳಾ ಸಬಲೀಕರಣ ಕಾರ್ಯಕ್ರಮಗಳನ್ನು ರೂಪಿಸಿ ರಾಜ್ಯದ ಗ್ರಾಮೀಣ ಮಹಿಳೆಯರ ಜೀವನದಲ್ಲಿ ಸಮಗ್ರ ಸಬಲೀಕರಣವನ್ನುಂಟು ಮಾಡಿವೆ ಎಂದು ತಿಳಿಸಿದರು.
Join The Telegram | Join The WhatsApp |