Join The Telegram | Join The WhatsApp |
ಬೆಳಗಾವಿ :
ಬೆಳಗಾವಿ ಹೊರವಲಯದ ನ್ಯೂವೈಭವ ನಗರ ಬಳಿ ಶನಿವಾರ ರಾತ್ರಿ ಲಾರಿ ಬೆಂಕಿಗಾಹುತಿಯಾಗಿದೆ. ಲಾರಿಯಲ್ಲಿ ದುಬಾರಿ ಫರ್ನಿಚರ್ ಇದ್ದವು. ಬೆಂಕಿ ಹೊತ್ತುಕೊಂಡ ಸಂದರ್ಭದಲ್ಲಿ ಲಾರಿ ಚಾಲಕ ಕೆಲ ಪ್ರಮಾಣದಲ್ಲಿ ಫರ್ನಿಚರ್ ಇಳಿಸಿದ್ದಾನೆ.
ನ್ಯೂ ವೈಭವ ನಗರ ಸಮೀಪದ ರಾಷ್ಟ್ರೀಯ ಹೆದ್ದಾರಿ ಮೇಲೆ ಸರಕು ತುಂಬಿಕೊಂಡಿದ್ದ ಈ ಲಾರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಚಾಲಕ ಹೆದ್ದಾರಿ ಬಳಿ ಲಾರಿ ನಿಲ್ಲಿಸಿದ ವೇಳೆ ಈ ಘಟನೆ ಸಂಭವಿಸಿದೆ. ಲಾರಿ ಪುಣೆಯಿಂದ ಬೆಂಗಳೂರು ಕಡೆ ಹೋಗುತ್ತಿತ್ತು.
ಆಕಸ್ಮಿಕವಾಗಿ ಬೆಂಕಿ ಹೊತ್ತಿ ಉರಿದ ಲಾರಿ
ಇಲ್ಲಿಯ ಶಿವಾ ಪೆಟ್ರೋಲ್ ಪಂಪ್ ಬಳಿ ಶನಿವಾರ ಲಾರಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಕರಕಲಾಗಿದೆ.
ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳ ಬೆಂಕಿ ನಂದಿಸುವ ಪ್ರಕ್ರಿಯೆಯಲ್ಲಿ ತೊಡಗಿದೆ. ಪೊಲೀಸರು ಸಹ ಸ್ಥಳಕ್ಕೆ ಧಾವಿಸಿ ಘಟನೆಗೆ ಕಾರಣ ಏನು ಎಂಬ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.
Join The Telegram | Join The WhatsApp |