ಬಸವಕಲ್ಯಾಣ : ಮುಂದಿನ ವರ್ಷ ವಚನ ಸಾಹಿತ್ಯ ವಿಶ್ವವಿದ್ಯಾಲಯವನ್ನು ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ, ಬಸವಕಲ್ಯಾಣದಲ್ಲಿ ಮಾತನಾಡಿದ ಅವರು, ಬಸವಕಲ್ಯಾಣದಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪನೆ ನಿಟ್ಟಿನಲ್ಲಿ ಶೀಘ್ರ ಕ್ರಮ ಕೈಗೊಳ್ಳಲಾಗುವುದು. ಈ ಮೂಲಕ ವಚನ ಸಾಹಿತ್ಯವನ್ನು ಪ್ರೋತ್ಸಾಹಿಸುವ ಕೆಲಸಕ್ಕೆ ಸರಕಾರ ಮುಂದಾಗಲಿದೆ ಎಂದರು.