ಹೆಬ್ರಿ: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲ್ಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವಂತೆ ಸಾಮಾಜಿಕ ಹೋರಾಟಗಾರ ಎಚ್.ಕೆ.ಶ್ರೀಧರ ಶೆಟ್ಟಿ ಮನವಿ ಮಾಡಿದ್ದಾರೆ.

ಹೆಬ್ರಿ ಸರ್ಕಾರಿ ಆಸ್ಪತ್ರೆಗೆ ದಿನನಿತ್ಯವೂ ಹಲವು ರೋಗಿಗಳು ಭೇಟಿ ನೀಡುತ್ತಿದ್ದು, ಹೆಚ್ಚಿನ ಸವಲತ್ತು ಇಲ್ಲದೆ ಜನರಿಗೆ ಸಮಸ್ಯೆಯಾಗುತ್ತಿದೆ. ಹೆಬ್ರಿ ತಾಲ್ಲೂಕಾಗಿ ಹಲವು ವರ್ಷಗಳೇ ಕಳೆದಿದೆ. ಈ ನಿಟ್ಟಿನಲ್ಲಿ ಆಸ್ಪತ್ರೆಯನ್ನು ತಾಲ್ಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಿದರೆ ಹೆಚ್ಚಿನ ಸವಲತ್ತು ದೊರೆಯಲಿದೆ. ಆದ್ದರಿಂದ ಆಸ್ಪತ್ರೆಯನ್ನು ಶೀಘ್ರ ಮೇಲ್ದರ್ಜೆಗೇರಿಸುವಂತೆ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅವರು ಮನವಿ ಸಲ್ಲಿಸಿದ್ದಾರೆ.