ಬೆಳಗಾವಿ : ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ, ತರಬೇತಿ ಸಂಸ್ಥೆಯು ಮೇ ತಿಂಗಳಿನ ಎರಡನೇ ವಾರದಲ್ಲಿ 3೦ ದಿನಗಳ ಘರೇಲು ವಿದ್ಯುತ್ ಉಪಕರಣ ಸೇವಾ ಉದ್ಯಮಿ (ಹೌಸ್ ವೈರಿಂಗ್) ತರಬೇತಿಯು ಪ್ರಾರಂಭವಾಗಲಿದ್ದು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕೀಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿಂದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ಉಚಿತವಾಗಿ ನೀಡಲಾಗುತ್ತದೆ.
ಆಸಕ್ತರು ಮೇ 15 ಒಳಗಾಗಿ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ ಅಥವಾ ಸಂಸ್ಥೆಯ ದೂ. ೯೯೮೦೫೧೦೭೧೭, ೯೪೮೩೪೮೫೪೮೯ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.