ಬೆಂಗಳೂರು: ಬೆಂಗಳೂರು ನಗರದ ನೂತನ ಪೊಲೀಸ್ ಮಿಷನ‌ರ್ ಆಗಿ ಸೀಮಂತ್ ಕುಮಾರ್ ಸಿಂಗ್‌ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಗುರುವಾರ ರಾತ್ರಿ ಆದೇಶ ಹೊರಡಿಸಿದೆ.

ಪೊಲೀಸ್‌ ಕಮಿಷನ್ ಆಗಿದ್ದ ಬಿ.ದಯಾನಂದ ಅವರನ್ನು ಅಮಾನತು ಮಾಡಲಾಗಿದ್ದು, ಆ ಸ್ಥಾನಕ್ಕೆ ಹೊಸಬರನ್ನು ನೇಮಕ ಮಾಡಲಾಗಿದೆ.

ಸೀಮಂತ್ ಕುಮಾರ್ ಸಿಂಗ್ ಅವರು ಬಿಎಂಟಿಎಫ್ ಎಡಿಜಿಪಿ ಆಗಿದ್ದರು. 39ನೇ ಪೊಲೀಸ್ ಕಮಿಷನರ್ ಆಗಿ ನೇಮಕವಾಗಿದ್ದಾರೆ.

ಡಿಸಿಆರ್‌ಇ ಎಡಿಜಿಪಿ ಅರುಣ್ ಚಕ್ರವರ್ತಿ, ಸಂಸ್ಥೆ ಎಡಿಜಿಪಿ ಬಿಕೆ.ಸಿಂಗ್, ಗುಪ್ತದಳದ ಎಡಿಜಿಪಿ ಹಾಗೂ ವಾರ್ತಾ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಳರ್ ಹಾಗೂ ಕಾನೂನು ಸುವ್ಯವಸ್ಥೆ ಎಡಿಜಿಪಿ ಆರ್.ಹಿತೇಂದ್ರ ಹಾಗೂ ಸೀಮಂತ್ ಕುಮಾರ್ ಸಿಂಗ್ ಅವರ ಮಧ್ಯೆ ನಗರ ಪೊಲೀಸ್ ಕಮಿಷನರ್ ಹುದ್ದೆಗೆ ಪೈಪೋಟಿ ಇತ್ತು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ಸಂಜೆ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ದಯಾನಂದ ಅವರನ್ನು ಅಮಾನತು ಮಾಡಲಾಗಿದೆ. ಬಿ.ದಯಾನಂದ ಅವರು ನಗರ ಪೊಲೀಸ್ ಕಮಿಷನರ್ ಆಗಿ ಎರಡು ವರ್ಷ ಕೆಲಸ ಮಾಡಿದ್ದರು.