ಬೆಳಗಾವಿ : ಲೋಕಸಭೆ ಚುನಾವಣೆಯಲ್ಲಿ ಚಿಕ್ಕೋಡಿಯಲ್ಲಿ ಪ್ರಿಯಾಂಕಾ ಜಾರಕಿಹೊಳಿ ಮುನ್ನಡೆ ಸಾಧಿಸಿದ ಹಿನ್ನೆಲೆಯಲ್ಲಿ ಕಿಡಿಗೇಡಿಯೊಬ್ಬ ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಕೂಗಿದ್ದಾನೆ. ಚಿಕ್ಕೋಡಿಯ ಮತ ಎಣಿಕೆ ಕೇಂದ್ರದ ಹೊರವಲಯದಲ್ಲಿ ಘಟನೆ ನಡೆದಿದೆ. ಪಾಕಿಸ್ತಾನಕ್ಕೆ, ಪ್ರಿಯಾಂಕಾ ಜಾರಕಿಹೊಳಿಗೆ ಜಿಂದಾಬಾದ್‌ ಎಂದು ಕೂಗಿದ್ದಾನೆ. ಜಮೀರ್ ನಾಯಕವಾಡಿ ( 26 ವರ್ಷ) ಎಂಬುವ ಪಾಕಿಸ್ತಾನದ ಪರ ಜಿಂದಾಬಾದ್ ಘೋಷಣೆ ಕೂಗಿದ್ದು ಕೊನೆಗೂ ಪೊಲೀಸರು ಆತನನ್ನು ಬಂಧಿಸಿದ್ದಾರೆ.