ಬೆಂಗಳೂರು :
ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಾಪ್ಟರ್ 1ರಲ್ಲಿ ನಟಿಸಲು ನಿಮಗೊಂದು ಸುವರ್ಣಾವಕಾಶ. ಈ ಸಿನಿಮಾದಲ್ಲಿ ನಟಿಸಲು 30 ವರ್ಷದಿಂದ 60 ವರ್ಷದವರೆಗಿನ ಪುರುಷರು ಮತ್ತು 18-60 ವರ್ಷದ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು https://www.kantara.film/ 14ರೊಳಗೆ ಅರ್ಜಿ ಸಲ್ಲಿಸಬೇಕು. ರೀಲ್ಸ್ ಮತ್ತು ಅವುಗಳನ್ನೇ ಹೋಲುವ ಇತರೆ ವಿಷಯಗಳನ್ನು ಸ್ವೀಕರಿಸುವುದಿಲ್ಲ ಎಂದು ರಿಷಬ್ ಶೆಟ್ಟಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಸದ್ಯಕ್ಕೆ ನಾನೇ ಹೀರೋ, ನಾಯಕಿ ಹಾಗೂ ಇತರ ಪಾತ್ರದ ಹುಡುಕಾಟ ನಡೆಯಬೇಕಿದೆ. ಕನ್ನಡದ ಕಲಾವಿದರಿಗೆ ಮೊದಲ ಆದ್ಯತೆ ಇರಲಿದೆ. ಸಿನಿಮಾದಲ್ಲಿ ನಟಿಸಲು ಹೊಸ ಕಲಾವಿದರ ಹುಡುಕಾಟ ನಡೆಯುತ್ತಿದೆ. ಕರಾವಳಿ ಹಾಗೂ ಇತರೆ ಭಾಗದ ಕಲಾವಿದರು ಇರಲಿದ್ದಾರೆ ಎಂದು ರಿಷಬ್ ಶೆಟ್ಟಿ ಹೇಳಿದ್ದರು. ಚಿತ್ರದಲ್ಲಿ ನಟಿಸಲು ಕಲಾವಿದರಿಗಾಗಿ ಹುಡುಕಾಟ ಮಾಡುತ್ತಿದೆ.

ತುಳುನಾಡಿನ ದೈವ ಹಾಗೂ ಆಚರಣೆ ಸುತ್ತ ಸಾಗಿದ ‘ಕಾಂತಾರ’ ಕನ್ನಡದಲ್ಲಿ ಹಿಟ್ ಆಗಿ, ಪ್ರಾದೇಶಿಕ ಭಾಷೆಯಲ್ಲಿ ರಿಮೇಕ್ ಆಗಿ 400 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ಅಂತರಾಷ್ಟ್ರೀಯ ಮಟ್ಟದಲ್ಲೂ ಗಮನ ಸೆಳೆದಿತ್ತು. ಈ ಸಿನಿಮಾದಲ್ಲಿ ನೀವು ನಟಿಸಬೇಕು ಎಂದಾಗಿದ್ದರೆ ನೀವು ಆಡಿಶನ್‌ನಲ್ಲಿ ಭಾಗವಹಿಸಬಹುದಾಗಿದೆ
ಎಂದು ರಿಷಬ್ ಶೆಟ್ಟಿ ತಿಳಿಸಿದ್ದಾರೆ.