ಬೆಳಗಾವಿ : ಅರಭಾವಿ ವಿಧಾನಸಭಾ ಕ್ಷೇತ್ರದ ಮೂಡಲಗಿ ಪಟ್ಟಣದ ನಿವಾಸಿ ಆಶಾ ಸು. ತಳವಾರ ಎಂಬ ಮಹಿಳೆ ಗೃಹಲಕ್ಷ್ಮಿ ಯೋಜನೆಯ ಹಣ ಕೂಡಿಟ್ಟು ಬಟ್ಟೆ ವ್ಯಾಪಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಮಹಿಳೆ ಈ ಮೂಲಕ ಬದುಕು ಕಟ್ಟಿಕೊಂಡಿರುವುದನ್ನು ಕೇಳಿ, ಖುಷಿಯಾಯಿತು.ಗೃಹಲಕ್ಷ್ಮೀ ಯೋಜನೆ ಇಂದು ಲಕ್ಷಾಂತರ ಮಹಿಳೆಯರ ಕನಸುಗಳನ್ನು ಸಾಕಾರಗೊಳಿಸಿ, ನೆಮ್ಮದಿಯ ಜೀವನ ನಡೆಸಲು ದಾರಿ ಮಾಡಿಕೊಟ್ಟಿದೆ. ನಿಮ್ಮ ಜೀವನದಲ್ಲೂ ಗೃಹಲಕ್ಷ್ಮಿ ಯೋಜನೆಯಿಂದಾದ ಪ್ರಯೋಜನವನ್ನು ನಮ್ಮೊಂದಿಗೆ ಹಂಚಿಕೊಳ್ಳಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ ಮಾಡಿದ್ದಾರೆ.