ಬೆಳಗಾವಿ: ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಅಶೋಕ ಚಂದರಗಿ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

ಬೆಳಗಾವಿಯಲ್ಲಿ ಪತ್ರಕರ್ತರಾಗಿ, ಕನ್ನಡ ಹೋರಾಟಗಾರರಾಗಿ ಅಪಾರ ಹೆಸರು ಗಳಿಸಿರುವ ಅಶೋಕ ಚಂದರಗಿ ಅವರು ಕನ್ನಡದ ಕಟ್ಟಾಳು. ಕನ್ನಡಪರ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರನ್ನು ರಾಜ್ಯ ಸರಕಾರ ಕೊನೆಗೂ ಕನ್ನಡ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.