ಬೆಳಗಾವಿ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕನ್ನಡ ಕ್ರಿಯಾ ಸಮಿತಿ ನೀಡುವ ಕರ್ನಾಟಕ ಚೂಡಾಮಣಿ ಪ್ರಶಸ್ತಿಯನ್ನು ಬೆಳಗಾವಿಯ ಹಿರಿಯ ಪತ್ರಕರ್ತ ಹಾಗೂ ಖ್ಯಾತ ಕನ್ನಡ ಹೋರಾಟಗಾರ ಅಶೋಕ ಚಂದರಗಿ ಅವರಿಗೆ ಪ್ರದಾನ ಮಾಡಲಾಗಿದೆ.

ರವಿವಾರ ಧಾರವಾಡದ ಕರ್ನಾಟಕ ವಿದ್ಯಾವರ್ಧಕ
ಸಂಘದ ಸಭಾಂಗಣದಲ್ಲಿ ಖ್ಯಾತ ಲೇಖಕಿ ವೀಣಾ ಶಾಂತೇಶ್ವರ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಕ್ರಿಯಾ ಸಮಿತಿಯ ಗೌರವಾಧ್ಯಕ್ಷ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಮನು ಬಳಿಗಾರ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಕಾರ್ಯಕ್ರಮ ಉದ್ಘಾಟಿಸಿದರು.
ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಲಿಂಗರಾಜ ಪಾಟೀಲ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ
ಅನೇಕ ಪದಾಧಿಕಾರಿಗಳು ಪಾಲ್ಗೊಂಡಿದ್ದರು.