ಧಾರ್(ಮ.ಪ್ರ.): ಮಧ್ಯ ಪ್ರದೇಶದ ಧಾರ್ ಜಿಲ್ಲೆಯಲ್ಲಿರುವ ವಿವಾದಿತ 11ನೇ ಶತಮಾನದ ಭೋಜ್ಶಾಲಾ ದೇಗುಲ ಮತ್ತು ಮಸೀದಿ ಪ್ರಾಂಗಣದ ಸರ್ವೇಕ್ಷಣೆಯನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ) ಶುಕ್ರವಾರ ಆರಂಭಿಸಿದೆ.
ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಎಸ್ಪಿ ಮನೋಜ್ ಕುಮಾರ್ ಸಿಂಗ್, ‘ಕೋರ್ ಆದೇಶದ ಮೇರೆಗೆ ಶುಕ್ರವಾರ ಎಎಸ್ಐ ಸಮೀಕ್ಷೆ ಆರಂಭಿದೆ’ ಎಂದು ತಿಳಿಸಿದರು.
ಭೋಜ್ ಶಾಲಾ ಪ್ರಾಂಗಣದಲ್ಲಿ ಹಿಂದೂಗಳು ಮಧ್ಯಕಾಲೀನ ಯುಗದ ಕೆತ್ತನೆಯಿರುವ ವಾಗ್ದೇವಿ(ಸರಸ್ವತಿ) ಗುಡಿಯಿದೆ ಎಂದು ವಾದಿಸುತ್ತಿದ್ದರೆ. ಮುಸಲ್ಮಾನರು ಆ ಜಾಗದಲ್ಲಿ ಕಮಲ್ ಮೌಲಾ ಮಸೀದಿಯಿದೆ ಎಂದು ವಾದಿಸುತ್ತಿದ್ದಾರೆ. ಪ್ರಸ್ತುತಪ್ರತಿ ಮಂಗಳವಾರದಂದು ಹಿಂದೂಗಳು ಪೂಜಿಸುತ್ತಿದ್ದರೆ, ಪ್ರತಿ ಶುಕ್ರವಾರಗಳಂದು ಮುಸಲ್ಮಾನರು ಪ್ರಾರ್ಥಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇದರ ಮೂಲ ಕಟ್ಟಡವನ್ನು ಪತ್ತೆ ಮಾಡಲು ಈ ಜಾಗವನ್ನು 6 ವಾರಗಳೊಳಗೆ ಸರ್ವೇಕ್ಷಣೆ ಮಾಡಬೇಕೆಂದು ಮಧ್ಯ ಪ್ರದೇಶ ಹೈಕೋರ್ಟ್ ಎಎಸ್ಐಗೆ ಮಾ.11ರಂದು ಆದೇಶಿಸಿತ್ತು.