ಅರಿಕೋಡಿ : ಬೆಳ್ತಂಗಡಿ ತಾಲೂಕು ಬೆಳಾಲು ಗ್ರಾಮದ ಅರಿಕೋಡಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ವಾರ್ಷಿಕ ಉತ್ಸವದ ಪ್ರಯುಕ್ತ ಫೆಬ್ರವರಿ 12 ರಂದು ವಿವಿಧ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ದೇವಸ್ಥಾನದ ಧರ್ಮದರ್ಶಿ ಹರೀಶ ಅರಿಕೋಡಿ ಅವರು ತಿಳಿಸಿದ್ದಾರೆ.

ಫೆ.12 ರಂದು ಬೆಳಗ್ಗೆ 8 ಗಂಟೆಗೆ ಶ್ರೀ ಚಾಮುಂಡೇಶ್ವರಿ ದೇವಿಗೆ ಕಲಶ ಪೂಜೆ, ಕಲಶ ಪ್ರಧಾನ ಹೋಮ, ಪರಿವಾರ ಪೂಜೆ, ಕಲಶಾಭಿಷೇಕ, ಮಹಾಪೂಜೆ, ಪಲ್ಲ ಪೂಜೆ, ಮಹಾ ಅನ್ನಸಂತರ್ಪಣೆ, ರಾತ್ರಿ 8 ಗಂಟೆಗೆ ಶ್ರೀ ಚಾಮುಂಡೇಶ್ವರಿ ದೇವಿಯ ವಾರ್ಷಿಕ ಉತ್ಸವ ನಡೆಯಲಿದೆ.

ಸಂಜೆ 6 ರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸದಾನಂದ ಮುಂಡಾಜೆ ಅವರ ಸಾರಥ್ಯದಲ್ಲಿ ಕೀರ್ತನಾ ಕಲಾ ತಂಡದ ಸದಸ್ಯರಿಂದ ಭಕ್ತಿಗೀತೆಗಳು, ಸನ್ಮಾನ ಕಾರ್ಯಕ್ರಮ ನಡೆಯಲಿದೆ.ಎಂದು ಅರಿಕೋಡಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಅರಿಕೋಡಿ ಅವರು ತಿಳಿಸಿದ್ದಾರೆ.