ಬೆಂಗಳೂರು: ಮಂಗಳವಾರ ಮಧ್ಯರಾತ್ರಿ ನಡೆದ ಮಹತ್ವದ ಬೆಳವಣಿಗೆಯಲ್ಲಿ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಪಾಳಯದಲ್ಲಿ ಗುರುತಿಸಿಕೊಂಡಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರನ್ನು ಭೇಟಿಯಾದ ಯೋಗೇಶ್ವರ್ ಅವರು ಇದೀಗ ಬಹುತೇಕ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಬಹುತೇಕ ಖಚಿತವಾದಂತಿದೆ.