Join The Telegram | Join The WhatsApp |
ಬೆಳಗಾವಿ :
ಅಥಣಿ ಪಟ್ಟಣದ ಹೊರವಲಯದಲ್ಲಿ ಮಾಜಿ ಶಾಸಕ, ಜೆಡಿಎಸ್ ಮುಖಂಡ ಕಲ್ಲಪ್ಪ ಮಗೆಣ್ಣನವರ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.
ರಸ್ತೆಯಲ್ಲಿ ಚಲಿಸುತ್ತಿದ್ದ ಲಾರಿಯೊಂದರ ಟೈಯರ್ ಬ್ಲಾಸ್ಟ್ ಆಗಿ ಕಾರಿನ ಮೇಲೆ ಟೈಯರ್ ಬಿದ್ದ ಪರಿಣಾಮ, ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಪಲ್ಟಿಯಾಗಿದೆ.
ಮಾಜಿ ಶಾಸಕರು ಸೇರಿದಂತೆ 6 ಜನರು ವಿಜಯಪುರದಿಂದ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮಕ್ಕೆ ಕಾರಿನಲ್ಲಿ ಶುಕ್ರವಾರ ರಾತ್ರಿ ಹೋಗುತ್ತಿದ್ದರು. ಲಾರಿಯು ಅಥಣಿಯಿಂದ ವಿಜಯಪುರದ ಕಡೆ ಸಾಗುತ್ತಿತ್ತು.
ಅಪಘಾತದಲ್ಲಿ ಕಾರಿನಲ್ಲಿದ್ದ ಮಗೆಣ್ಣವರ ಸೇರಿದಂತೆ 6 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಥಣಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Join The Telegram | Join The WhatsApp |